ಯುವತಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಪಿಎಸ್‌ಐ; ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

Date:

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ವೊಬ್ಬ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿ, ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅತ್ಯಾಚಾರಗೈದು ಓಡಿಹೋಗಲು ಯತ್ನಿಸಿದ ಪಿಎಸ್‌ಐನನ್ನು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹಿಡಿದು, ಕಂಬಕ್ಕೆ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನನ್ನು ಬಂಧಿಸಲಾಗಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಕಾಮುಕ ಪಿಎಸ್‌ಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ಆಕೆಯ ತಂದೆ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಯುವತಿಯ ಚೀರಾಟ ಕೇಳಿ ಮನೆಗೆ ಧಾವಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು, ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ.

ಪೊಲೀಸ್‌ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ, ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪಿಯು ಆಗ್ರಾದ ಪಿಎಸ್‌ಐ ಸಂದೀಪ್‌ ಕುಮಾರ್ (34) ಎಂದು ತಿಳಿದುಬಂದಿದೆ. ವಿಡಿಯೋ ಆಧರಿಸಿ ಆತನನ್ನು ಅಮಾನತುಗೊಳಿಸಿ ಪೊಲೀಸ್‌ ಆಯುಕ್ತ ಪ್ರೀತೀಂದರ್ ಸಿಂಗ್‌ ಆದೇಶಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಪಿಎಸ್‌ಐ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 452ರ ಅನ್ವಯ ಎಫ್‍ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಿಎಸ್‍ಐ ಹಾಗೂ ಒಬ್ಬ ಪೊಲೀಸ್ ಯುವತಿಯ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ನಾವು ವಿಚಾರಣೆಗೆ ಬಂದಿದ್ದೇವೆಂದು ಹೇಳಿದ್ದಾರೆ. ಆದರೆ, ಈ ಹಿಂದೆಯೂ ಆತ ಕಿರುಕುಳ ನೀಡಿದ್ದರಿಂದ ಬಾಗಿಲು ತೆರೆಯಲು ಯುವತಿ ನಿರಾಕರಿಸಿದ್ದಾಳೆ. ಆಗ ಸಂದೀಪ್ ಛಾವಣಿಯ ಮೂಲಕ ಜಿಗಿದು ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

”ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ. ಸಂದೀಪ್ ವಿರುದ್ಧ ಇಲಾಖಾ ತನಿಖೆಗೂ ಆದೇಶ ನೀಡಲಾಗಿದೆ” ಎಂದು ಡಿಸಿಪಿ ಸೋನಮ್ ಕುಮಾರ್ ತಿಳಿಸಿದ್ದಾರೆ.

”ಗಸ್ತು ತಿರುಗುವ ನೆಪದಲ್ಲಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದ ಸಂದೀಪ್, ಎರಡು ತಿಂಗಳಿಂದ ಯುವತಿಗೆ ಕಿರುಕುಳ ನೀಡುತ್ತಿದ್ದ. ನಾವು ಆತನನ್ನು ಹಿಡಿದಾಗ ಆತ ಪಾನಮತ್ತನಾಗಿದ್ದ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...