ಪುದುಚೆರಿಯ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಇದ್ದ ಗೊಂದಲಗಳು ಮುಕ್ತಾಯಗೊಂಡಿವೆ. ಸೀಟು ಹಂಚಿಕೆಯನ್ನೂ ಮಾಡಿಕೊಂಡಿವೆ.
ಈ ಸಂಬಂಧಿಸಿದಂತೆ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಡಿಎಂಕೆ ಸಂಸದ ಎಸ್. ಜಗತ್ರತ್ನಚಗನ್ ಮತ್ತು ಪಿಪಿಸಿಸಿ(ಪುದುಚೆರಿ ಪ್ರದೇಶ್ ಕಾಂಗ್ರೆಸ್ ಸಮಿತಿ) ಅಧ್ಯಕ್ಷ ವಿ. ವೈಥಿಲಿಂಗಂ, ಪುದುಚೆರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿದ್ದಾರೆ.
‘ಇಂಡಿಯಾ’ ಮೈತ್ರಿಕೂಟದ ವಿಸಿಕೆ ಮತ್ತು ಸಿಪಿಐ ಪಕ್ಷಗಳಿಗೆ ಡಿಎಂಕೆ ತನ್ನ ಕ್ಷೇತ್ರಗಳನ್ನೇ ಬಿಟ್ಟುಕೊಡಲಿದೆ ಎಂದು ತಿಳಿಸಿದ್ದಾರೆ.
2021ರ ವಿಧಾನಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 2ಕ್ಷೇತ್ರಗಳಲ್ಲಿ ಗೆದ್ದಿದ್ದರೆ, 13 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಡಿಎಂಕೆ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
ಇದನ್ನೂ ಓದಿ : ಸೌಜನ್ಯ ಪ್ರಕರಣ | ಸುಪ್ರೀಂ ನೋಟಿಸ್: ‘ಸರ್ಕಾರ ಹಿಂದೆ ಸರಿಯದಿರಲಿ’ ಎಂದ ಮಹಿಳಾಪರ ಹೋರಾಟಗಾರರು
ಇನ್ನು, ಪುದುಚೆರಿ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಮಾ.23(ಸೋಮವಾರ) ದಿನವಾಗಿತ್ತು. ಇಂದಿನಿಂದ(ಮಾರ್ಚ್ 24) ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26ರೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ.
ಪುದುಚೆರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ.





