ಕೇರಳ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಸೇರಿ ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Date:

2017ರ ಬಹುಚರ್ಚಿತ ಕೇರಳ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಅಪರಾಧಿ ಪಲ್ಸರ್ ಸುನಿ ಸೇರಿದಂತೆ ಆರು ಮಂದಿಗೆ ಎರ್ನಾಕುಲಂನ ಹೆಚ್ಚುವರಿ ವಿಶೇಷ ಸೆಷನ್ಸ್ ನ್ಯಾಯಾಲಯವು ತಲಾ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಗೆ ನಿಗದಿಪಡಿಸಲಾದ ಕನಿಷ್ಠ ಶಿಕ್ಷೆ ಇದಾಗಿದ್ದು, ಪ್ರತಿಯೊಬ್ಬ ಅಪರಾಧಿಗೂ ತಲಾ 50,000 ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ದಂಡದ ಮೊತ್ತದಿಂದ ಸಂತ್ರಸ್ತ ನಟಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ವಿಶೇಷ ನ್ಯಾಯಾಧೀಶರಾದ ಹನಿ ಎಂ. ವರ್ಗೀಸ್ ಆದೇಶಿಸಿದ್ದಾರೆ.

ಅಪರಾಧಿಗಳೆಲ್ಲರೂ 40 ವರ್ಷಕ್ಕಿಂತ ಕೆಳಗಿನವರಾಗಿದ್ದು, ಒಬ್ಬರನ್ನು ಹೊರತುಪಡಿಸಿ ಉಳಿದವರಿಗೆ ಯಾವುದೇ ಹಿಂದಿನ ಅಪರಾಧ ಹಿನ್ನೆಲೆ ಇಲ್ಲ. ಹೀಗಾಗಿ, ಸಮಾಜದ ಒತ್ತಡ ಅಥವಾ ಪ್ರಕರಣದ ಸಂವೇದನಾಶೀಲತೆಗೆ ಒಳಗಾಗದೇ, ಕಾನೂನಿನ ಚೌಕಟ್ಟಿನಲ್ಲಿ ವಿವೇಚನೆ ಬಳಸಿ ‘ಗರಿಷ್ಠ ಶಿಕ್ಷೆ’ (ಜೀವಾವಧಿ) ಬದಲಿಗೆ 20 ವರ್ಷಗಳ ಶಿಕ್ಷೆ ವಿಧಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತಿರುಪತಿ ದೇವಾದಿದೇವ ತಿಮ್ಮಪ್ಪನಿಗೇ ನಾಮ ಹಾಕುವ ಧೂರ್ತರು!

ಕೃತ್ಯದ ಪ್ರಮುಖ ರೂವಾರಿ ಪಲ್ಸರ್ ಸುನಿ (A1), ಮಾರ್ಟಿನ್ ಆಂಟನಿ (A2), ಬಿ. ಮಣಿಕಂದನ್ (A3), ವಿಜೀಶ್ ವಿ.ಪಿ (A4), ಸಲೀಂ (A5) ಮತ್ತು ಪ್ರದೀಪ್ (A6) ಅವರನ್ನು ಅಪರಾಧ ಸಂಚು, ಅಪಹರಣ ಮತ್ತು ಅತ್ಯಾಚಾರದ ಅಡಿಯಲ್ಲಿ ದೋಷಿಗಳೆಂದು ಪರಿಗಣಿಸಲಾಗಿದೆ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಕ್ಕಾಗಿ ಐಟಿ ಕಾಯ್ದೆಯಡಿ ಪಲ್ಸರ್ ಸುನಿಗೆ ಹೆಚ್ಚುವರಿಯಾಗಿ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಎಲ್ಲ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಲು ಕೋರ್ಟ್ ಸೂಚಿಸಿದೆ.

ಶಿಕ್ಷೆ ಪ್ರಕಟಣೆಗೂ ಮುನ್ನ, ಅಪರಾಧಿಗಳು ತಮ್ಮ ವಯಸ್ಸಾದ ಪೋಷಕರು ಮತ್ತು ಕುಟುಂಬದ ಸ್ಥಿತಿಯನ್ನು ವಿವರಿಸಿ ಕಣ್ಣೀರಿಟ್ಟು, ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಾಸಿಕ್ಯೂಷನ್ ಪರ ವಕೀಲರು ನಿರ್ಭಯಾ ಪ್ರಕರಣವನ್ನು ಉಲ್ಲೇಖಿಸಿ ಗರಿಷ್ಠ ಶಿಕ್ಷೆಗೆ ಒತ್ತಾಯಿಸಿದ್ದರು.

ಮೂರು ದಿನಗಳ ಹಿಂದಷ್ಟೇ, ಈ ಪ್ರಕರಣದ ಸಂಚುಕೋರ ಎಂದು ಆರೋಪಿಸಲಾಗಿದ್ದ ಪ್ರಮುಖ ಮಲಯಾಳಂ ನಟ ದಿಲೀಪ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...