ಪುಣೆ ಬಸ್‌ನಲ್ಲಿ ಅತ್ಯಾಚಾರ ಪ್ರಕರಣ | ಆರೋಪಿಯ ಚಿತ್ರ ಬಿಡುಗಡೆ, ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ

Date:

ಮಹಾರಾಷ್ಟ್ರದ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಯುವತಿಯ ಅತ್ಯಾಚಾರ ನಡೆಸಿದ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆರೋಪಿಯ ಸುಳಿವು ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಅತಿದೊಡ್ಡ ಬಸ್ ಜಂಕ್ಷನ್‌ಗಳಲ್ಲಿ ಸ್ವರ್ಗೇಟ್ ಒಂದಾಗಿದೆ. ಈ ಬಸ್ ನಿಲ್ದಾದಣದಲ್ಲಿ 26 ವರ್ಷದ ಯುವತಿ ಬಸ್‌ಗಾಗಿ ಕಾಯುತ್ತಿದ್ದಾಗ ಆರೋಪಿ ಬಂದು ಯುವತಿ ಕಾಯುವ ಬಸ್‌ ಬೇರೆ ಪ್ಲಾಟ್‌ಫಾರ್ಮ್‌ನಲ್ಲಿದೆ ಎಂದು ಸುಳ್ಳು ಹೇಳಿ ಕರೆದೊಯ್ದು ಬಸ್‌ನಲ್ಲಿ ಅತ್ಯಾಚಾರ ಎಸಗಿದ್ದನು. ಆರೋಪಿಯನ್ನು ದತ್ತಾತ್ರಯ ರಾಮದಾಸ್ ಗಡೆ (36) ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಈಗಾಗಲೇ ಕಳ್ಳತನಕ್ಕೆ ಸಂಬಂಧಿಸಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪುಣೆ | ಜನನಿಬಿಡ ಪ್ರದೇಶದಲ್ಲಿ ಬಸ್‌ನೊಳಗೆ ಯುವತಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಜನನಿಬಿಡ ಪ್ರದೇಶದಲ್ಲಿಯೇ ಯುವತಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದು, ಯುವತಿ ತನ್ನ ಸ್ನೇಹಿತನ ಸಲಹೆ ಮೇರೆಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಸಿಸಿಟಿವಿಯಲ್ಲಿ ಆರೋಪಿ ಯುವತಿಯನ್ನು ಕರೆದೊಯ್ಯುತ್ತಿರುವುದು ಕಂಡುಬಂದಿದ್ದು, ಸದ್ಯ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆತನ ಬಂಧನಕ್ಕೆ ಸಹಾಯ ಮಾಡಿದವರಿಗೆ ಅಥವಾ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದಾರೆ.

ಈಗಾಗಲೇ ಪೊಲೀಸರು ಆರೋಪಿಯ ಪತ್ತೆಗಾಗಿ ಸುಮಾರು 13 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ಪೈಕಿ ಎಂಟು ತಂಡಗಳು ಅಪರಾಧ ವಿಭಾಗದ ಅಧಿಕಾರಿಗಳನ್ನು ಒಳಗೊಂಡಿದೆ. ಆರೋಪಿಯ ಕುಟುಂಬಸ್ಥರು ಮತ್ತು ಸಹೋದರನ ವಿಚಾರಣೆ ನಡೆಸಿದ್ದಾರೆ.

ಜನನಿಬಿಡ ಪ್ರದೇಶದಲ್ಲಿಯೇ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದಾದರೆ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ? ಮಹಿಳೆಯರು ತಮ್ಮ ಮನೆಯಲ್ಲಿಯೇ ಸುರಕ್ಷಿತವಾಗಿಲ್ಲ. ಇನ್ನು ಬಸ್, ರೈಲು, ಇತರೆ ಸಾರ್ವಜನಿಕ ಪ್ರದೇಶದಲ್ಲಿ ಹೇಗೆ ಸುರಕ್ಷಿತವಾಗಿರಲು ಸಾಧ್ಯ. ಈ ಕಾಮಾಂಧರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...