ಪಂಜಾಬ್‌ | ಎಎಪಿ ನಾಯಕನ ಮನೆ ಮೇಲೆ 23 ಸುತ್ತು ಗುಂಡಿನ ದಾಳಿ

Date:

ಪಂಜಾಬ್‌ನ ಆಡಳಿತಾರೂಢ ಎಎಪಿ ನಾಯಕ ದಲ್ಜಿತ್ ಸಿಂಗ್ ರಾಜು ಮೇಲೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ. ಪಂಜಾಬ್‌ನ ಫಾಗ್ವಾರಾ-ಜಂಡಿಯಾಲಾ ರಸ್ತೆಯ ದರ್ವೇಶ್ ಪಿಂಡ್ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆಡಳಿತಾರೂಢ ಎಎಪಿ ಪಂಜಾಬ್‌ನಲ್ಲಿ ‘ಯುದ್ಧ ನಾಶಿಯಾನ್ ವಿರುಧ್’ ಅಭಿಯಾನ (ಮಾದಕವಸ್ತುಗಳ ವಿರುದ್ಧದ ಅಭಿಯಾನ) ನಡೆಯುತ್ತಿದೆ. ಅಭಿಯಾನದಲ್ಲಿ ದಲ್ಜಿತ್ ಸಿಂಗ್ ರಾಜು ಅವರು ಮುಂಚೂಣಿಯಲ್ಲಿದ್ದಾರೆ. ರಾಜು ಅವರನ್ನು ಹೋಶಿಯಾರ್‌ಪುರ ಸಂಸದ ರಾಜ್ ಕುಮಾರ್ ಚಬ್ಬೇವಾಲ್ ಅವರ ಆಪ್ತ ಎಂದು ಪರಿಗಣಿಸಲಾಗಿದೆ. ಅವರ ಮನೆಯ ಮೇಲೆ ದುಷ್ಕರ್ಮಿಗಳು ಬರೋಬ್ಬರಿ 23 ಸುತ್ತು ಗುಂಡು ಹಾರಿಸಿದ್ದಾರೆ. ಮನೆಯ ಕಿಟಕಿ ಮತ್ತು ಬಾಗಿಲಿನ ಗಾಜುಗಳು ಪುಡಿಪುಡಿಯಾಗಿವೆ.

“ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸಲಾಗುತ್ತಿದೆ ಮತ್ತು ಸ್ಥಳದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಗುಂಡಿನ ದಾಳಿಯ ಕುರಿತು ಎಲ್ಲಾ ಕೋನಗಳಿಂದಲೂ ಕೂಲಂಕಷವಾಗಿ ತನಿಖೆ ನಡೆಯುತ್ತಿದೆ” ಎಂದು ಫಾಗ್ವಾರಾ ಉಪ ವಿಭಾಗೀಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಮಾಧ್ವಿ ಶರ್ಮಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಬಂದು ತಮ್ಮ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಾಜು ತಿಳಿಸಿದ್ದಾರೆ.

“ಮೊದಲು ನಾನು ಪಟಾಕಿ ಇರಬಹುದು ಎಂದು ಭಾವಿಸಿದೆ. ಆದರೆ, ನಂತರ ನನ್ನ ಹೆಂಡತಿ, ಇಬ್ಬರು ಪುರುಷರು ಮನೆಯ ಮೇಲೆ ಗುಂಡಿನ ದಾಳಿ ನಡೆಸುತ್ತಿರುವುದನ್ನು ನೋಡಿದರು”. ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದೆ ಎಂದು ರಾಜು ಹೇಳಿದ್ದಾರೆ.

ಸ್ಥಳದಲ್ಲಿ ಕೈಬರಹದ ಪತ್ರ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದ್ದು, ಇಂಗ್ಲಿಷ್‌ನಲ್ಲಿ ಬರೆಯಲಾದ ಅದರಲ್ಲಿ ಒಂದು ನಿರ್ದಿಷ್ಟ ಗುಂಪಿನ ಹೆಸರು ಮತ್ತು 5 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...