ಪಂಜಾಬ್ ಬಂದ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ರಸ್ತೆ ತಡೆ ನಡೆಸಿದ ರೈತರು

Date:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ಬಂದ್‌ಗೆ ಕರೆ ನೀಡಿರುವ ರೈತರು ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದಾರೆ.

ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇದನ್ನು ಓದಿದ್ದೀರಾ? ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿರುವ ರೈತ ಸಂಘಟನೆಗಳು: ಫಲ ನೀಡದ ಕೇಂದ್ರದೊಂದಿಗಿನ ಮಾತುಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಬಂದ್ ನಡೆಯಲಿದೆ. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ಕುಳಿತಿದ್ದು ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದೆ ಎಂದು ವರದಿಯಾಗಿದೆ.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ.

“ಬೆಳಿಗ್ಗೆ 7ರಿಂದ ಸಂಜೆ 4 ರವರೆಗೆ ಬಂದ್ ಆಚರಿಸಲಾಗುತ್ತದೆ. ಆದರೆ ತುರ್ತು ಸೇವೆಗಳು ಎಂದಿನಂತೆ ಇರಲಿದೆ. ವಿಮಾನ ನಿಲ್ದಾಣಕ್ಕೆ, ಉದ್ಯೋಗ ಸಂದರ್ಶನಕ್ಕೆ, ವಿವಾಹಕ್ಕೆ ಹಾಜರಾಗುವವರಿಗೆ ವಿನಾಯಿತಿಯಿದೆ. ಎಲ್ಲಾ ಈ ವಿಷಯಗಳನ್ನು ನಮ್ಮ ಬಂದ್ ಕರೆಯಿಂದ ಹೊರಗಿಡಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ರೈತ ಹೋರಾಟ | ದೆಹಲಿ ಚಲೋ ಬೆನ್ನಲ್ಲೇ ಗ್ರಾಮೀಣ ಭಾರತ್ ಬಂದ್‌ಗೆ ಸಿದ್ಧತೆ

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಸೋಮವಾರ 35 ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಈವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನುಬದ್ಧವಾಗಿ ಖಾತರಿಪಡಿಸುವಂತೆ ಒತ್ತಾಯಿಸಿ ನೂರಾರು ರೈತರು ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...