ಸರ್ಕಾರ ಕರೆದ ಸಭೆಗೆ ಹಾಜರಾಗಲು ಪಂಜಾಬ್ ರೈತ ಸಂಘಗಳು ನಕಾರ

Date:

ಮಾರ್ಚ್ 21ರಂದು ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಕರೆದ ಸಭೆಗೆ ಪಂಜಾಬ್ ರೈತ ಸಂಘಗಳು ಹಾಜರಾಗಿಲ್ಲ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮತ್ತು ಭಾರತಿ ಕಿಸಾನ್ ಯೂನಿಯನ್ ಏಕತಾ ಉಗ್ರಾನ್ (ಬಿಕೆಯು ಉಗ್ರಾನ್) ಸಭೆಗೆ ಹಾಜರಾಗಿಲ್ಲ.

ತಾವು ಒಪ್ಪದ ಷರತ್ತುಗಳು ಇದ್ದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ರೈತ ಸಂಘಗಳು ಹೇಳಿದೆ. ಹಾಗೆಯೇ ಸರ್ಕಾರದೊಂದಿಗೆ ಸಭೆ ನಡೆಸುವ ಮೊದಲು ಮೂರು ಪ್ರಮುಖ ಬೇಡಿಕೆಗಳನ್ನು ರೈತ ಸಂಘಟನೆಗಳು ಮುಂದಿಟ್ಟಿದೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ ಸೇರಿ 11 ವಿಮಾನ ನಿಲ್ದಾಣಗಳ ಖಾಸಗೀಕರಣ: ಯಾರ ಸುಪರ್ದಿಗೆ; ಮೋದಿ ಗೆಳೆಯರಾದ ಅದಾನಿಗೋ, ಅಂಬಾನಿಗೋ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಕೆಯು ಉಗ್ರಾನ್ ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾನ್ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದರು. ರೈತರು ಮಾತುಕತೆಯಿಂದ ತಪ್ಪಿಸಿಕೊಳ್ಳುತ್ತಿಲ್ಲ ಎಂದೂ ಹೇಳಿದರು. ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಸಭೆಯಲ್ಲಿ ಹಾಜರಿರಬೇಕು ಆಗ್ರಹಿಸಿದರು.

ಮಾರ್ಚ್ 3 ರಂದು ಮುಖ್ಯಮಂತ್ರಿಯೊಂದಿಗೆ ನಡೆದ ಹಿಂದಿನ ಸಭೆಯನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಮಾನ್ ಸಭೆಯಿಂದ ಹೊರನಡೆದಾಗ ದಿಢೀರ್ ಆಗಿ ಸಭೆ ನಿಲ್ಲಿಸಲಾಯಿತು. ಈ ಸಂದರ್ಭಗಳನ್ನು ಗಮನಿಸಿದರೆ, ಸಭೆ ಸೂಕ್ತವೇ ಎಂದು ನಿರ್ಧರಿಸುವುದು ಮುಖ್ಯ ಎಂದು ಹೇಳಿದ್ದಾರೆ.

ಮಾರ್ಚ್ 19ರಂದು ಶಂಭು ಮತ್ತು ಕನೌರಿಯಲ್ಲಿ ಪ್ರತಿಭಟನಾನಿರತ ರೈತ ನಾಯಕರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರನ್ನು ಪೊಲೀಸ್ ಪಡೆಗಳು ಸ್ಥಳಗಳಿಂದ ಬಲವಂತವಾಗಿ ಹೊರಹಾಕಿದ್ದರು.

ಸಂಘಟನೆಯು ಮಾರ್ಚ್ 26ರಂದು ಚಂಡೀಗಢದಲ್ಲಿ ದಿನವಿಡೀ ಪ್ರತಿಭಟನೆ ನಡೆಸುವ ಘೋಷಣೆ ಮಾಡಿದೆ. ಬಂಧಿತ ಎಲ್ಲಾ ರೈತರು ಮತ್ತು ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಅವರ ವಸ್ತುಗಳನ್ನು ಹಿಂತಿರುಗಿಸಬೇಕು ಮತ್ತು ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಕ್ಕೆ ಪರಿಹಾರವನ್ನು ನೀಡಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿದೆ.

ವರ್ಷಗಳಿಂದ ರೈತರು ಪಂಜಾಬ್‌ ಗಡಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ರೈತರೆಡೆ ಗಮನವೂ ಹರಿಸುತ್ತಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇದೀಗ ಪಂಜಾಬ್ ಸರ್ಕಾರವು ಪಂಜಾಬ್‌ನ ರೈತರ ಬೇಡಿಕೆ ಈಡೇರಿಕೆಗೆ ಹಿಂದೆ ಮುಂದೆ ನೋಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...