ಪ್ರಿಯತಮೆಗಾಗಿ ಮಹಿಳೆ ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದ ಯುವಕ

Date:

ಯುವಕನೊಬ್ಬ ತನ್ನ ಪ್ರಿಯತಮೆಗಾಗಿ ಮಹಿಳೆಯ ವೇಷ ತೊಟ್ಟು ಸರ್ಕಾರಿ ಉದ್ಯೋಗದ ಪರೀಕ್ಷೆಯನ್ನು ಬರೆಯಲು ಬಂದ ಘಟನೆ ಪಂಜಾಬ್‌ ರಾಜ್ಯದಲ್ಲಿ ನಡೆದಿದೆ.

ಪಂಜಾಬ್‌ ಫರೀದಾಕೋಟ್‌ನ ಡಿಎವಿ ಶಾಲೆಯಲ್ಲಿ ಜನವರಿ 7 ರಂದು ಈ ಘಟನೆ ನಡೆದಿದ್ದು ಬಾಬಾ ಫರೀದ್ ಆರೋಗ್ಯ ವಿಜ್ಞಾನ ವಿವಿಯ ಬಹುಸೇವಾ ಆರೋಗ್ಯ ಕಾರ್ಯಕರ್ತೆ ಹುದ್ದೆಗೆ ಪುರುಷನೊಬ್ಬ ಮಹಿಳೆಯ ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದಿದ್ದಾನೆ.

ಆರೋಪಿ ಅಂಗ್ರೇಜ್ ಸಿಂಗ್ ತನ್ನ ಪ್ರಿಯತಮೆ ಪರಮ್‌ಜಿತ್ ಕೌರ್‌ ಹೆಸರಿನಲ್ಲಿ ಆಕೆಯ ಪರವಾಗಿ ಮಹಿಳೆಯ ವೇಷ ತೊಟ್ಟು ಪರೀಕ್ಷೆ ಬರೆಯಲು ನಿರ್ಧರಿಸಿದ್ದ. ಸಂಪೂರ್ಣ ಮಹಿಳೆಯ ರೀತಿ ಕಾಣಲು ಅಂಗ್ರೇಜ್ ಸಿಂಗ್ ಕೆಂಪು ಬಳೆಗಳು, ಲಿಪ್‌ಸ್ಟಿಕ್‌ ಹಾಗೂ ಬಿಂದಿ ಧರಿಸಿದ್ದ. ಅಲ್ಲದೆ ಮಹಿಳೆಯ ಉಡುಪನ್ನು ಧರಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಪರೀಕ್ಷಾಧಿಕಾರಿಗಳು ಶೀಘ್ರವಾಗಿ ಆತನ ನಿಜ ಸ್ವರೂಪವನ್ನು ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ತಾನು ಮಹಿಳೆ ಎಂದು ಸಾಬೀತುಪಡಿಸುವ ಸಲುವಾಗಿ ಪ್ರಿಯತಮೆಯ ಹೆಸರಿನಲ್ಲಿ ನಕಲಿ ಚುನಾವಣಾ ಹಾಗೂ ಆಧಾರ್ ಗುರುತು ಪತ್ರವನ್ನು ತಯಾರಿಸಿಕೊಂಡಿದ್ದ. ಆದರೆ ಎಲ್ಲವೂ ಸರಿಯಾಗಿ ಆತನ ಅದೃಷ್ಟ ಕೆಟ್ಟಿದ್ದು ಬೆರಳಚ್ಚು ಪರೀಕ್ಷೆಯ ಸಂದರ್ಭದಲ್ಲಿ. ಬಯೋ ಮೆಟ್ರಿಕ್ ಯಂತ್ರವು ಆರೋಪಿಯ ನಿಜ ಬಂಡವಾಳವನ್ನು ಬಯಲು ಮಾಡಿತ್ತು.

ಅಂಗ್ರೇಜ್‌ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಆತನ ಗೆಳತಿ ಅಭ್ಯರ್ಥಿ ಪರಮ್‌ಜಿತ್‌ ಅರ್ಜಿಯನ್ನು ಆಡಳಿತ ಮಂಡಳಿ ತಿರಸ್ಕರಿಸಿದೆ.

“ಬಾಬಾ ಫರೀದ್ ಆರೋಗ್ಯ ವಿಜ್ಞಾನ ವಿವಿಯಿಂದ ದೂರನ್ನು ಸ್ವೀಕರಿಸಲಾಗಿದ್ದು, ಘಟನೆಯ ಬಗ್ಗೆ ತನಿಖೆಯನ್ನು ನೆಡಸುತ್ತಿದ್ದೇವೆ.ವಿಚಾರಣೆ ಪೂರ್ಣಗೊಂಡ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

ನಕಲಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳುವುದು ಗಂಭಿರ ಪ್ರಕರಣವಾಗಿದ್ದು, 2011ರಲ್ಲಿಇದೇ ರೀತಿಯ ಪ್ರಕರಣ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿತ್ತು. ಪದವೀಧರನೊಬ್ಬ 12ನೇ ತರಗತಿಯ ವಿದ್ಯಾರ್ಥಿಯ ಹೆಸರಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ. ಮೇಲ್ವೀಚಾರಕರು ಆರೋಪಿಯನ್ನು ಪತ್ತೆಹಚ್ಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...