ಡ್ರಗ್ಸ್ ದಂಧೆಯಲ್ಲಿ ಶಾಮೀಲು, ದಂಧೆಗೆ ಆ್ಯಂಬುಲೆನ್ಸ್ ಬಳಕೆ: ಪಂಜಾಬ್ ಮಹಿಳಾ ಪೊಲೀಸ್ ಬಂಧನ

Date:

ಡ್ರಗ್ಸ್‌ ದಂಯಲ್ಲಿ ಶಾಮೀಲಾಗಿದ್ದಾರೆ. ಮಾತ್ರವಲ್ಲದೆ, ಮಾದಕ ವಸ್ತುಗಳನ್ನು ಸಾಗಿಸಲು ಆ್ಯಂಬುಲೆನ್ಸ್‌ ಬಳಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬ್‌ನ ಹಿರಿಯ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಪಂಜಾಬ್‌ನ ಹಿರಿಯ ಮಹಿಳಾ ಕಾನ್‌ಸ್ಟೇಬಲ್‌ ಅಮನ್‌ದೀಪ್‌ ಕೌರ್‌ ಅವರನ್ನು ಪಂಜಾಬ್‌ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಬಂಧಿಸಿದೆ. ಕೌರ್‌ ಅವರು 17.71 ಕೆ.ಜಿ ಹೆರಾಯಿನ್ಅನ್ನು ಸಾಗಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಂಜಾಬ್‌ ಸರ್ಕಾರವು ಮಾದಕ ದ್ರವ್ಯಗಳ ಮಾರಟ ಮತ್ತು ಬಳಕೆ ವಿರುದ್ಧ ‘ಯುದ್ಧ್ ನಶೇಯನ್ ವಿರುಧ್’ ಅಭಿಯಾನ ನಡೆಸುತ್ತಿದೆ. ಅದಕ್ಕಾಗಿ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ರಚಿಸಿದೆ. ಭಟಿಂಡಾ ಸಮೀಪದ ಬಾದಲ್ ಫ್ಲೈಓವರ್ ಬಳಿ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 17.71 ಕೆ.ಜಿ ಹೆರಾಯಿನ್‌ಅನ್ನು ವಶಕ್ಕೆ ಪಡೆಯಲಾಗಿದೆ. ಹೆರಾಯಿನ್‌ಅನ್ನು ಸಾಗಿಸುತ್ತಿದ್ದ ವಾಹನವು ಕೌರ್‌ ಅವರಿಗೆ ಸಂಬಂಧಿಸಿದ್ದಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಹನದ ಮಾಲೀಕರ ಗುರುತ ಪತ್ತೆ ಮಾಡಿದ ಬಳಿಕ, ಕೌರ್‌ ಅವರನ್ನು ಬಂಧಿಸಲಾಗಿದೆ. ಅವರ ಎಸ್‌ಯುವಿ, ಮಹೀಂದ್ರಾ ಥಾರ್ ಅನ್ನು ಕಾರ್ಯಪಡೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಬನ್ಸ್ ಸಿಂಗ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್‌ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ

ಕಾನ್‌ಸ್ಟೆಬಲ್ ಕೌರ್‌ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೌರ್‌ ವಿರುದ್ಧ ಗುರ್ಮೀತ್ ಕೌರ್ ಎಂಬ ಮಹಿಳೆ ಹಲವು ಆರೋಪಗಳನ್ನು ಮಾಡಿದ್ದಾರೆ. “ಅಮನ್‌ದೀಪ್ ಕೌರ್ ಅವರು ತನ್ನ ಪತಿ ಬಲ್ವಿಂದರ್‌ ಸಿಂಗ್‌ ಅವರೊಂದಿಗೆ ಲಿವ್‌-ಇನ್‌ ಸಂಬಂಧ ಹೊಂದಿದ್ದಾರೆ. ತಮ್ಮ ಪತಿ ಆ್ಯಂಬುಲೆನ್ಸ್‌ ಚಾಲಕನಾಗಿದ್ದು, ಆ ಆ್ಯಂಬುಲೆನ್ಸ್‌ಅನ್ನು ಹೆರಾಯಿನ್ ಸಾಗಾಟಕ್ಕೆ ಬಳುತ್ತಾರೆ. ಕಾನ್ಸ್‌ಟೇಬರ್‌ ಆಗಿರುವ ಅಮನ್‌ದೀಪ್ ಕೌರ್ ಅವರು 2 ಕೋಟಿ ರೂ. ಮೌಲ್ಯದ ಮನೆ, ಕಾರುಗಳು ಮತ್ತು ಒಂದು ಲಕ್ಷ ಮೌಲ್ಯದ ಗಡಿಯಾರವನ್ನು ಹೊಂದಿದ್ದಾರೆ. ಇಷ್ಟು ಆಡಂಬರದ ಜೀವನ ನಡೆಸಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...