ಪುಷ್ಪಾ 2 ಕಾಲ್ತುಳಿತ | ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಯಾವುದೇ ರಾಜಿಯಿಲ್ಲ: ರೇವಂತ್ ರೆಡ್ಡಿ

Date:

ಪುಷ್ಪಾ 2 ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಸಿನಿಮಾ ತಂಡದ ಜೊತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಭೆ ನಡೆದಿದೆ. ಈ ನಡುವೆ, “ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಡಿಸೆಂಬರ್ 4ರಂದು ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿತ್ತು. ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ್ದು ಅಭಿಮಾನಿಗಳ ದಂಡೇ ಥಿಯೇಟರ್‌ನತ್ತ ಧಾವಿಸಿದೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? 75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಬಾಲಕ ಚೇತರಿಸಿಕೊಂಡಿದ್ದು, ಇನ್ನೋರ್ವ ಬಾಲಕನ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಈಗಾಗಲೇ ನಟ ಅಲ್ಲು ಅರ್ಜುನ್ ಬಂಧನ, ಬಿಡುಗಡೆ ನಡೆದಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, “ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಜನಸಂದಣಿಯನ್ನು ನಿಯಂತ್ರಿಸುವುದು ಸೆಲೆಬ್ರಿಟಿಗಳ ಜವಾಬ್ದಾರಿಯಾಗಿದೆ. ಶಾಂತಿ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕಿತ್ತು” ಎಂದಿದ್ದಾರೆ. ಇನ್ನು ಈ ಹಿಂದೆಯೂ ನಟ ಮತ್ತು ಸಿನಿಮಾ ತಂಡವನ್ನು ದೂಷಿಸಿ ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದರು.

ಇಂದು ನಡೆದ ಸಭೆಯಲ್ಲಿ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಮತ್ತು ರಾಜ್ಯದ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದಿಲ್ ರಾಜು ಸೇರಿದಂತೆ ತೆಲುಗು ಚಿತ್ರರಂಗದ ಹಲವು ಪ್ರಮುಖ ಸೆಲೆಬ್ರೆಟಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...