ಪುಷ್ಪಾ 2 ಕಾಲ್ತುಳಿತ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ

Date:

ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪ್ರೀಮಿಯರ್ ಶೋ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನು ಓದಿದ್ದೀರಾ? ಹೈದರಾಬಾದ್ | ಪುಷ್ಪಾ 2 ಪ್ರೀಮಿಯರ್ ವೇಳೆ ಕಾಲ್ತುಳಿತ; ಮಹಿಳೆ ಸಾವು, ಬಾಲಕ ಗಂಭೀರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯರಾತ್ರಿ ಪುಷ್ಪಾ 2 ಪ್ರೀಮಿಯರ್ ಪ್ರದರ್ಶನವಿತ್ತು. ಈ ವೇಳೆ ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಆಗಮಿಸಿದ್ದಾರೆ. ನಾಯಕನನ್ನು ನೋಡುವ ತರಾತುರಿಯಲ್ಲಿ ಜನರು ಪ್ರವೇಶ ದ್ವಾರದತ್ತ ನುಗ್ಗಿದ್ದು ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಈ ಸಂಬಂಧ ನಟನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಕದ ತಟ್ಟಿದ್ದಾರೆ. ಇನ್ನು ಬಂಧನ ಸೇರಿದಂತೆ ಎಲ್ಲಾ ಕಾನೂನು ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ಅಲ್ಲು ಅರ್ಜುನ್ ತನ್ನ ಅರ್ಜಿಯಲ್ಲಿ ವಿನಂತಿಸಿದ್ದಾರೆ.

ಘಟನೆ ವೇಳೆ ನಟ ರಂಗಮಂದಿರ ಒಳಗಿದ್ದ ಕಾರಣ ನಟನಿಗೆ ಹೊರಗೆ ಏನು ನಡೆಯುತ್ತಿದೆ ಎಂದು ತಿಳಿದಿರಲಿಲ್ಲ ಎಂದು ಅಲ್ಲು ಪರ ವಕೀಲರು ವಾದಿಸಿದ್ದಾರೆ. ಹಾಗೆಯೇ ಯಾವುದೇ ಅವಘಡ ತಪ್ಪಿಸಲು ಸಿನಿಮಾ ತಂಡವು ಥಿಯೇಟರ್ ಆಡಳಿತ ಮತ್ತು ಸಹಾಯಕ ಪೊಲೀಸ್ ಆಯುಕ್ತರಿಗೆ ನಟನ ಆಗಮನದ ಬಗ್ಗೆ ಮಾಹಿತಿ ನೀಡಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

ಇನ್ನು ಥಿಯೇಟರ್ ಆಡಳಿತವು ಇದನ್ನು ದೃಢಪಡಿಸಿದೆ. ಹೆಚ್ಚಿನ ಜನರು ಬರುವ ಕಾರಣ ಜನರ ನಿಯಂತ್ರಣಕ್ಕಾಗಿ ಹೆಚ್ಚುವರಿ ಪೊಲೀಸರು ನಿಯೋಜಿಸುವಂತೆ ಮನವಿ ಮಾಡಲಾಗಿದೆ. ಆದರೆ ಸೀಮಿತ ಸಂಖ್ಯೆಯ ಅಧಿಕಾರಿಗಳನ್ನು ಮಾತ್ರ ನಿಯೋಜಿಸಲಾಗಿದೆ ಎಂದು ಅಲ್ಲು ಪರ ವಕೀಲರು ಹೇಳಿದ್ದಾರೆ.

ರೇವತಿ ಪತಿ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಮತ್ತು ಭದ್ರತಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...