ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

Date:

ಡಿಸೆಂಬರ್ 4 ರಂದು ‘ಪುಷ್ಪಾ-2’ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದ ತನಿಖೆಯ ಭಾಗವಾಗಿ ಮಂಗಳವಾರ ಪೊಲೀಸರ ಮುಂದೆ ಹಾಜರಾಗುವಂತೆ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಸಮನ್ಸ್ ನೀಡಲಾಗಿದೆ.

ನಟನಿಗೆ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಚಿಕ್ಕಡಪಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರಾಜು ನಾಯ್ಕ್ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಈ ಹಿಂದೆ ಅಲ್ಲು ಅರ್ಜುನ್ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದರು.

ಇದನ್ನು ಓದಿದ್ದೀರಾ? ಅಲ್ಲು ಅರ್ಜುನ್ ಕೇಸಿನಲ್ಲಿ ಭಾರೀ ಅನಿರೀಕ್ಷಿತ ತಿರುವು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಷ್ಪಾ 2 ಪ್ರೀಮಿಯರ್ ಶೋ ವೇಳೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಬರುತ್ತಿದ್ದಂತೆ ಅಭಿಮಾನಿಗಳು ದೌಡಾಯಿಸಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್, ಅವರ ಭದ್ರತಾ ಸಿಬ್ಬಂದಿಗಳು ಮತ್ತು ಥಿಯೇಟರ್‌ನ ಮಾಲೀಕರ, ನಿರ್ವಾಹಕರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಥಿಯೇಟರ್ ಮಾಲೀಕ, ಮ್ಯಾನೇಜರ್, ಭದ್ರತಾ ಅಧಿಕಾರಿಯನ್ನು ಡಿಸೆಂಬರ್ 8ರಂದು ಬಂಧಿಸಲಾಗಿದೆ.

ನಟ ಅಲ್ಲು ಅರ್ಜುನ್ ಅವರನ್ನು ಕೂಡಾ ಡಿಸೆಂಬರ್ 13ರಂದು7 ಬಂಧಿಸಲಾಗಿದೆ. ಆದರೆ ಅದೇ ದಿನ ನಟನಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದ್ದು ಮರುದಿನವೇ ಜೈಲಿನಿಂದ ಬಿಡುಗಡೆಯಾಗಿದ್ದರು.

ನಟ ಅಲ್ಲು ಅರ್ಜುನ್ ಪೊಲೀಸರು ಅನುಮತಿ ನಿರಾಕರಿಸಿದರೂ ಕೂಡಾ ಸಂಧ್ಯಾ ಥಿಯೇಟರ್‌ಗೆ ಭೇಟಿ ನೀಡಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...