ಪುಷ್ಪಾ 2 ಕಾಲ್ತುಳಿತ | ಗಾಯಾಳು ಬಾಲಕನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

Date:

ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಾಲಕನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ಪುಷ್ಪಾ 2 ಸಿನಿಮಾದ ನಿರ್ಮಾಪಕರು 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಲ್ಲು ಅರ್ಜುನ್ 1 ಕೋಟಿ ರೂಪಾಯಿ, ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರು ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಈ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ. ಓರ್ವ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ಬಾಲಕನನ್ನು ಭೇಟಿಯಾದ ಬಳಿಕ ಚಿತ್ರ ನಿರ್ಮಾಪಕ ಮತ್ತು ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈದ್ಯರೊಂದಿಗೆ ಮಾತನಾಡಿದ ಬಳಿಕ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದ್ದು ನಮಗೆ ತುಂಬಾ ಸಂತೋಷವಾಗಿದೆ. ಬಾಲಕ ಮತ್ತು ಕುಟುಂಬವನ್ನು ಬೆಂಬಲಿಸಲು ನಾವು 2 ಕೋಟಿ ರೂಪಾಯಿಗಳನ್ನು ನೀಡಲು ನಿರ್ಧರಿಸಿದ್ದೇವೆ. ಅಲ್ಲು ಅರ್ಜುನ್ ಒಂದು ಕೋಟಿ ರೂಪಾಯಿ, ನಿರ್ಮಾಪಕರು 50 ಲಕ್ಷ ರೂಪಾಯಿ ಮತ್ತು ನಿರ್ದೇಶಕರು 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಮೊತ್ತವನ್ನು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷ ದಿಲ್ ರಾಜು ಅವರಿಗೆ ಹಸ್ತಾಂತರಿಸಲಾಗುತ್ತಿದೆ” ಎಂದು ತಿಳಿಸಿದರು.

ಡಿಸೆಂಬರ್ 4ರಂದು ‘ಪುಷ್ಪಾ-2’ ಚಿತ್ರದ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ಬಂದಿದ್ದು ಈ ವೇಳೆ ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದರೆ, ಎಂಟು ವರ್ಷ ಬಾಲಕ ಇನ್ನೂ ಚೇತರಿಸಿಕೊಂಡಿಲ್ಲ. ಆಮ್ಲಜನಕ ಮತ್ತು ವೆಂಟಿಲೇಟರ್ ಬೆಂಬಲದಲ್ಲಿದ್ದಾನೆ ಎಂದು ಬಾಲಕನ ತಂದೆ ಭಾಸ್ಕರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಲ್ಲು ಅರ್ಜುನ್ ಕೇಸಿನಲ್ಲಿ ಭಾರೀ ಅನಿರೀಕ್ಷಿತ ತಿರುವು!

ಇನ್ನು ಈಗಾಗಲೇ ಅಲ್ಲು ಅರ್ಜುನ್ ಅವರು ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳ ಚೆಕ್ ನೀಡಿದ್ದರು. ಹಾಗೆಯೇ ಭಾಸ್ಕರ್ ದೂರನ್ನು ಕೂಡಾ ಹಿಂಪಡೆದಿದ್ದಾರೆ. “ಘಟನೆಯ ಮರುದಿನ ಅಲ್ಲು ಅರ್ಜುನ್ ಸಿಬ್ಬಂದಿಯಿಂದ ನನಗೆ ಬೆಂಬಲ ಸಿಕ್ಕಿತು, ನನ್ನ ಮೇಲೆ ಯಾವುದೇ ಒತ್ತಡವಿಲ್ಲ” ಎಂದು ಭಾಸ್ಕರ್ ಹೇಳಿಕೊಂಡಿದ್ದಾರೆ.

ಇನ್ನು ಇನ್ನೋರ್ವ ಬಾಲಕ ಶ್ರೀತೇಜ್ ಆರೋಗ್ಯ ಸುಧಾರಿಸಿದೆ. ವೆಂಟಿಲೇಟರ್ ಬೆಂಬಲವಿಲ್ಲದೆಯೇ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮಂಗಳವಾರ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...