ಶಸ್ತ್ರಚಿಕಿತ್ಸೆಗಾಗಿ ಯುಕೆಯಲ್ಲಿರುವ ರಾಘವ್ ಚಡ್ಡಾ, ದೃಷ್ಟಿ ಕಳೆದುಕೊಳ್ಳುವ ಗಂಭೀರ ಸ್ಥಿತಿಯಿತ್ತು: ದೆಹಲಿ ಸಚಿವ

Date:

ಎಎಪಿ ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಯುಕೆಗೆ ತೆರಳಿದ್ದಾರೆ. ಅವರಿಗೆ ದೃಷ್ಟಿ ಹೋಗುವ ಗಂಭೀರ ಸ್ಥಿತಿ ಎದುರಾಗಿತ್ತು ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.

ರಾಘವ್ ಚಡ್ಡಾ ಅವರು ಚುನಾವಣಾ ಪ್ರಚಾರಕ್ಕೆ ಗೈರುಹಾಜರಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸೌರಭ್ ಭಾರದ್ವಾಜ್, “ರಾಘವ್ ಚಡ್ಡಾ ಕಣ್ಣುಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅದಾದ ಬಳಿಕ ಚಿಕಿತ್ಸೆ ಪಡೆಯಲು ಯುಕೆಗೆ ಅವರು ತೆರಳಿದರು. ಸ್ಥಿತಿ ಗಂಭೀರವಾಗಿದ್ದು, ಸಕಾಲಿಕ ಚಿಕಿತ್ಸೆ ನೀಡದಿದ್ದರೆ ಕುರುಡುತನದ ಸಾಧ್ಯತೆಯಿದೆ ಎಂದು ನನಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮುಂದುವರೆದ ಅಮಾನತು ಸರಣಿ: ಈ ಬಾರಿ ಎಎಪಿಯ ರಾಘವ್‌ ಚಡ್ಡಾ ಸರದಿ

“ರಾಘವ್ ಚಡ್ಡಾ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅವರು ಗುಣಮುಖರಾದ ತಕ್ಷಣ ಭಾರತಕ್ಕೆ ಹಿಂದಿರುಗಲಿದ್ದಾರೆ. ಬಳಿಕ ಪಕ್ಷದ ಪ್ರಚಾರದಲ್ಲಿ ಸೇರಲಿದ್ದಾರೆ” ಎಂದು ಸೌರಭ್ ಭಾರದ್ವಾಜ್ ತಿಳಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧನ ಮಾಡಿದ ಬಳಿಕ ಎಎಪಿ ಸಂಸದ ರಾಘವ್ ಚಡ್ಡಾ ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ಆಗಾಗ ಆರೋಪ ಮಾಡುತ್ತಿತ್ತು. ಈ ಬಗ್ಗೆ ಸೌರಭ್ ಭಾರದ್ವಾಜ್ ಅವರನ್ನು ಪ್ರಶ್ನಿಸಿದ ಮಾಧ್ಯಮಗಳು ರಾಘವ್ ಚಡ್ಡಾ ನಿಮ್ಮೊಂದಿಗೆ ಇದ್ದಾರಾ ಎಂದು ಕೇಳಿದೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ | ಇ.ಡಿ ಆರೋಪ ಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು ಉಲ್ಲೇಖ

ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಸಚಿವರು, “ಚಡ್ಡಾ ನಮ್ಮೊಂದಿಗೆ ಇಲ್ಲ ಎಂದು ನಿಮಗೆ ಯಾರು ಹೇಳಿದ್ದು. ಅವರು ನಮ್ಮೊಂದಿಗೆ ಇಲ್ಲದಿದ್ದರೆ ಈಗಾಗಲೇ ಬಿಜೆಪಿ ಅವರನ್ನು ಎಲ್ಲಾದರು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುತ್ತಿತ್ತು” ಎಂದು ಹೇಳಿದರು. ಜೊತೆಗೆ ದೃಷ್ಟಿ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಇನ್ನು ರಾಘವ್ ಚಡ್ಡಾ ವಿರುದ್ಧ ಸುಳ್ಳು ಸುದ್ದಿ ಹರಡಿದ ಯೂಟ್ಯೂಬ್ ಚಾನೆಲ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಲೂಧಿಯಾನ ಲೋಕಸಭಾ ಕ್ಷೇತ್ರದ ಆಪ್ ಅಭ್ಯರ್ಥಿ ಅಶೋಕ್ ಪಪ್ಪಿ ಪರಾಶರ್ ಅವರ ಪುತ್ರ ವಿಕಾಸ್ ಪರಾಶರ್ ದೂರಿನ ಆದಾರದಲ್ಲಿ ಕ್ಯಾಪಿಟಲ್ ಟಿವಿ ಹೆಸರಿನ ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...