ಪ್ರಧಾನಿ ಬಗ್ಗೆ ಜಾತಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೈಪುರದಲ್ಲಿ ಪ್ರಕರಣ ದಾಖಲು

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಕಾನೂನು ತೊಡಕು ಎದುರಾಗಿದ್ದು,ಜೈಪುರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.

ಒಡಿಶಾದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಾತಿ ಬಗ್ಗೆ ಹೇಳಿಕೆ ನೀಡಿದ ಪ್ರಕರಣ ಇದಾಗಿದೆ.

ವಿಜಯ್ ಕಲಂದರ್ ಎಂಬ ಅರ್ಜಿದಾರರು ರಾಹುಲ್‌ ಗಾಂಧಿ ಜಾತಿವಾದಿ ಎಂದು ದೂರು ನೀಡಿದ್ದು, ಇದು ಕೇವಲ ಧಾರ್ಮಿಕ ಭಾವನೆಗಳಿಗೆ ಮಾತ್ರವಲ್ಲ ಹಲವು ಸಮುದಾಯಗಳಿಗೂ ನೋವುಂಟು ಮಾಡಿದೆ ಎಂದು ದಾವೆ ಹೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಅವರು ಫೆ.9 ರಂದು ಮೋದಿ ಅವುರು ಒಬಿಸಿ ಸಮುದಾಯದವರಲ್ಲ ಎಂದು ಹೇಳಿದ್ದರು.

ವಕೀಲರಾಗಿರುವ ಅರ್ಜಿದಾರರು ಜೈಪುರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯವು ಫೆ.23 ರಂದು ಕಚೇರಿ ವರದಿಗಾಗಿ ಕಾನೂನಾತ್ಮಕ ದೂರನ್ನು ದಾಖಲಿಸಿಕೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ರಾಹುಲ್ ಅವರ ಹೇಳಿಕೆ ಉದ್ದೇಶಪೂರ್ವಕವಾಗಿ ದೇಶದಲ್ಲಿ ಅಶಾಂತಿ ಸೃಷ್ಟಿಸಲಿದ್ದು, ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡಲಿದೆ. ಈ ಹೇಳಿಕೆಯು ಭಾರತದ ಏಕತೆ ಹಾಗೂ ಸಮಗ್ರತೆಯನ್ನು ವಿಭಜಿಸಲಿದೆ ಎಂದು ಕಲಂದರ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಒಡಿಶಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಮೋದಿ ಅವರು ಒಬಿಸಿ ಸಮುದಾಯದವರಲ್ಲ ಸಾಮಾನ್ಯ ಸಮುದಾಯದವರು ಎಂದು ನೀಡಿದ ಹೇಳಿಕೆ ವಿವಾದ ಹಬ್ಬಿಸಿತ್ತು.

ಮೋದಿಯವರು ತಮ್ಮನ್ನು ತಾವು ದೊಡ್ಡ ಒಬಿಸಿ ಎಂದು ಹೇಳಿಕೊಳ್ಳುತ್ತಾರೆ. ಆದರೆ ಹಿಂದುಳಿದ ಸಮುದಾಯಗಳ ನಾಯಕರೊಂದಿಗೆ ಕೆಲಸ ನಿರ್ವಹಿಸುವಾಗ ಬೂಟಾಟಿಕೆ ಹಾಗೂ ಇಬ್ಬಗೆ ನೀತಿ ಅನುಸರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...