ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್‌ ಜೊತೆ ನಂಟು ಉಲ್ಲೇಖಿಸಿ ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Date:

ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಅರೆ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಮೀರತ್‌ನಲ್ಲಿ ಮಾತನಾಡಿದ್ದ ಮೋದಿ ಕಾಂಗ್ರೆಸ್ ಕೊಳಕು ಮತ್ತು ನಾಚಿಕೆಯಿಲ್ಲದ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಮೋದಿ ಜಿ, ನೀವು ಲಜ್ಜೆ ಬಗ್ಗೆ ಮಾತನಾಡುತ್ತೀರಾ? ಲಜ್ಜೆ ಎಂದರೇನು ಎಂದು ನಾನು ನಿಮಗೆ ಹೇಳುತ್ತೇನೆ. ನಿಮ್ಮ ಹೆಸರು, ನಿಮ್ಮ ಸಚಿವರ ಹೆಸರು ಮತ್ತು ನಿಮ್ಮ ಸ್ನೇಹಿತನ ಹೆಸರು ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು, ಅಂತಹ ನೀಚ ಅಪರಾಧಿ ಜೊತೆ ಸಂಬಂಧ ಇರುವ ಬಗ್ಗೆ ಉಲ್ಲೇಖವಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಅವರ ಕಡತದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಬಗ್ಗೆ ಪ್ರಸ್ತಾಪಿಸಿರುವುದನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

“ನೀವು ಅಮೆರಿಕದೊಂದಿಗೆ ಮಾಡಿಕೊಂಡ ವ್ಯಾಪಾರ ಒಪ್ಪಂದದಲ್ಲಿ ನೀವು ದೇಶವನ್ನೇ ಮಾರಾಟ ಮಾಡಿದ್ದೀರಿ. ಇದು ನಾಚಿಕೆಗೇಡಿನ ಸಂಗತಿ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ಏಕಪಕ್ಷೀಯವಾಗಿದೆ. ಈ ಬಗ್ಗೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಅಮೆರಿಕದ ಉನ್ನತ ನ್ಯಾಯಾಲಯ ಟ್ರಂಪ್ ಅವರ ಸುಂಕ ವಿಧಿಸುವ ಕ್ರಮ ಕಾನೂನುಬಾಹಿರ ಎಂದು ಹೇಳಿರುವ ನಂತರ ಈ ಕುರಿತ ಟೀಕೆ ಹೆಚ್ಚಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಹುತ್ವದ ಬುಡಕ್ಕೇ ಕೊಡಲಿಪೆಟ್ಟು: ಸಮಾಜವನ್ನು ಆವರಿಸುತ್ತಿರುವ ಅಸಹಿಷ್ಣುತೆಯ ಕಾರ್ಮೋಡ

ನೀವು ನಮ್ಮ ದೇಶದ ಡೇಟಾವನ್ನು ಹಸ್ತಾಂತರಿಸಿದ್ದೀರಿ, ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದೀರಿ, ಜವಳಿ ಉದ್ಯಮವನ್ನು ಹಾಳುಮಾಡಿದ್ದೀರಿ, ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಅಮೆರಿಕದಲ್ಲಿ ಅದಾನಿ ವಿರುದ್ಧ ನಡೆಯುತ್ತಿರುವ ಪ್ರಕರಣ ನಿಮ್ಮ ನಿದ್ದೆಗೆಡಿಸಿದೆ ಎಂಬುದನ್ನು ದೇಶವೇ ತಿಳಿದಿದೆ. ಏಕೆಂದರೆ ಅದು ಬಿಜೆಪಿ ಮತ್ತು ನಿಮ್ಮ ಹಣಕಾಸು ವ್ಯವಸ್ಥೆಯ ವಿರುದ್ಧದ ಪ್ರಕರಣವಾಗಿದೆ. 14 ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...