ಅಪಶಕುನ ವಿವಾದ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪಶಕುನ ಹಾಗೂ ಪಿಕ್‌ ಪಾಕೇಟರ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದನ್ನು ವಿವರಿಸಿ ನ.24ರ ಸಂಜೆಯೊಳಗೆ ಉತ್ತರ ನೀಡುವಂತೆ ರಾಹುಲ್‌ ಗಾಂಧಿಯವರಿಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ವಾರದ ಆರಂಭದಲ್ಲಿ ರಾಜಸ್ಥಾನದಲ್ಲಿ ಚುನಾವಣಾ ರ್‍ಯಾಲಿ ನಡೆಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರುದ್ಧ ರಾಹುಲ್ ಗಾಂಧಿ ಅವರು ಅಪಶಕುನ ಎಂದು ತಮಾಷೆ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿ ಅಪಶಕುನ (ಪ್ರಧಾನಿ) ಆಗಮಿಸಿದ್ದಕ್ಕಾಗಿ ಭಾರತ ಸೋಲಬೇಕಾಯಿತು ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಶಕುನ ಹಾಗೂ ಪಿಕ್‌ಪಾಕೇಟರ್‌ ಎಂದು ಹೇಳಿರುವುದು ಹಿರಿಯ ನಾಯಕರಾದ ನಿಮಗೆ ಯೋಗ್ಯವಾದುದ್ದಲ್ಲ. ಅಲ್ಲದೆ ಕಳೆದ 9 ವರ್ಷಗಳಲ್ಲಿ ಉದ್ಯಮಿಗಳಿಗೆ ಸಾಲ ಮನ್ನ ಮಾಡಲಾಗಿದೆ ಎಂದು ನೀಡಿರುವ ಹೇಳಿಕೆಯ ಬಗ್ಗೆ ಬಿಜೆಪಿ ಗಂಭೀರವಾಗಿ ಆರೋಪಿಸಿದೆ. ಈ ಹೇಳಿಕೆಗಳು ಮಾದರಿ ನೀತಿ ಸಂಹಿತೆಯ ಹಲವು ಸೆಕ್ಷನ್‌ಗಳನ್ನು ಉಲ್ಲಂಘಿಸುತ್ತದೆ” ಎಂದು ಆಯೋಗವು ನೋಟಿಸ್‌ನಲ್ಲಿ ತಿಳಿಸಿದೆ.

ಅಪಶಕುನ ಎಂಬ ಪದವು ಮಾದರಿ ನೀತಿ ಸಂಹಿತೆಯ ಸೆಕ್ಷೆನ್‌ಗಳ ಅಭಿವ್ಯಕ್ತ ಸಮಾನತೆಯನ್ನು ಉಲ್ಲಂಘಿಸುವ ಪದಗಳಡಿ ಬರುತ್ತದೆ ಎಂದು ವಿವರಿಸಲಾಗಿದೆ. ನೋಟಿಸ್‌ನಲ್ಲಿ ಮಾದರಿ ನೀತಿ ಸಂಹಿತೆಯ ಕಲಂಗಳು ಹಾಗೂ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕೂಡ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...