ರಾಹುಲ್‌ ಗಾಂಧಿಯ ಮೋದಿ ಉಪನಾಮ ಹೇಳಿಕೆ; ಕೆಳ ನ್ಯಾಯಾಲಯದ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆಯಾಜ್ಞೆ  

Date:

  • ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ದಾಖಲಿಸಿದ್ದ ಪ್ರಕರಣ
  • ಸೂರತ್‌ನ ಕೆಳ ನ್ಯಾಯಾಲಯದ ಪ್ರಕರಣದಲ್ಲಿ ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆ

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೊಂದು ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.  

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಆದರೆ ಗುಜರಾತ್​ನ ಸೂರತ್ ಕೋರ್ಟ್​ನಲ್ಲಿರುವ ಪ್ರಕರಣಕ್ಕೆ ಇದು ಸಂಬಂಧವಿಲ್ಲ. ಆ ಪ್ರಕರಣ ಮುಂದುವರಿಯಲಿದೆ.  

ಗುಜರಾತಿನ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್‌ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ಪಾಟ್ನಾ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...