ದ್ವಿಚಕ್ರ ವಾಹನ ಕಳೆದುಕೊಂಡವನಿಗೆ ಹೊಸ ಬೈಕ್‌ ಕೊಡಿಸಿದ ರಾಹುಲ್‌ ಗಾಂಧಿ

Date:

ಬಿಹಾರದಲ್ಲಿ ನಡೆದ ‘ಮತದಾರರ ಅಧಿಕಾರ ಯಾತ್ರೆ’ ವೇಳೆ ದ್ವಿಚಕ್ರ ವಾಹನವನ್ನು ಕಳೆದುಕೊಂಡ ದರ್ಭಂಗಾದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೊಸ ಮೋಟರ್‌ ಸೈಕಲ್‌ ಕೊಡಿಸಿದ್ದಾರೆ.

ರಾಹುಲ್‌ ಗಾಂಧಿ ಅವರೇ ಖುದ್ದು ಬೈಕ್‌ ಕೀ ಹಸ್ತಾಂತರಿಸುವ ವಿಡಿಯೊವನ್ನು ಪಕ್ಷದ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದು, ಬೈಕ್‌ ಪಡೆದ ಶುಭಂ ಸೌರಭ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

‘ದರ್ಭಂಗಾದಲ್ಲಿ ನಡೆದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಜೊತೆ ಪಾಲ್ಗೊಂಡಿದ್ದೆ. ನನ್ನ ಬೈಕ್‌ ಅನ್ನು ಭದ್ರತಾ ಪಡೆಗಳಿಗೆ ನೀಡಿದ್ದೆ. ನಂತರ ನನ್ನ ಬೈಕ್‌ ಕಳೆದುಹೋಗಿರುವುದು ಗೊತ್ತಾಯಿತು’ ಎಂದು ಸೌರಭ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಿಕ್ಕು ತಪ್ಪಿಸುವ ದೃಶ್ಯಮಾಧ್ಯಮಗಳು ಮತ್ತು ಧರ್ಮಯಾತ್ರೆಗಳು

‘ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕರೆ ಮಾಡಿ, ರಾಹುಲ್‌ ಗಾಂಧಿ ಅವರು ಸೆ.1ರಂದು ಪಟ್ನಾದಲ್ಲಿ ಹೊಸ ಬೈಕ್‌ ನೀಡಲಿದ್ದಾರೆ ಎಂದು ದೂರವಾಣಿ ಕರೆ ಮಾಡಿ ತಿಳಿಸಿದರು. ಈ ವಿಷಯವನ್ನು ತಂದೆಗೂ ತಿಳಿಸಿದ್ದೆ. ನಾವಿಬ್ಬರೂ ಮೊದಲಿಗೆ ನಂಬಿರಲಿಲ್ಲ. ಆದರೂ ಪಟ್ನಾಕ್ಕೆ ತೆರಳಿ, ‘ಮತದಾರರ ಅಧಿಕಾರ ಯಾತ್ರೆ’ಯಲ್ಲಿ ಭಾಗಿಯಾಗಲು ನಿರ್ಧರಿಸಿದ್ದೆವು. ರಾಹುಲ್‌ ಅವರು ಗಾಂಧಿ ಮೈದಾನಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ನ ಕೀ ಹಸ್ತಾಂತರಿಸಿದರು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಹೊಸ ಮೋಟರ್‌ ಸೈಕಲ್‌ ಸಿಕ್ಕಿರುವುದಕ್ಕೆ ಖುಷಿಯಾಗಿದೆ. ಇದೇ ಮಾದರಿಯ ಬೈಕ್‌ ಅನ್ನು ಕಳೆದುಕೊಂಡಿದ್ದೆ. ಹಿರಿಯ ನಾಯಕರ ನಡೆಯಿಂದ ನಾನು ಭಾವುಕನಾಗಿದ್ದೇನೆ’ ಎಂದು ಸೌರಭ್‌ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...