ಮೋದಿ ಉಪನಾಮ ಪ್ರಕರಣ; ಗುಜರಾತ್‌ ಹೈಕೋರ್ಟ್‌ಗೆ ರಾಹುಲ್‌ ಗಾಂಧಿ ಮೇಲ್ಮನವಿ

Date:

  • ಮೋದಿ ಉಪನಾಮ ಪ್ರಕರಣ; ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್‌ ಸೆಷನ್ಸ್ ನ್ಯಾಯಾಲಯ
  • ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ತಡೆಯಾಜ್ಞೆ ನೀಡಿದ್ದ ಪಾಟ್ನಾ ಹೈಕೋರ್ಟ್

ಮೋದಿ ಉಪನಾಮ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಸೂರತ್‌ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆ ಗುಜರಾತ್‌ ಹೈಕೋರ್ಟ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಹುಲ್‌ ಗಾಂಧಿ ಸೂರತ್‌ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಶಿಕ್ಷೆ ರದ್ದಾದರೆ ಸಂಸದ ಸ್ಥಾನ ಮರಳಿ ಬರಲು ಸಹಾಯವಾಗುತ್ತದೆ.

ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಿರುವುದರಿಂದ ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಎರಡು ವರ್ಷ ಶಿಕ್ಷೆ ವಿಧಿಸಿರುವುದರಿಂದ ಕಳೆದ ತಿಂಗಳು ಅವರನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣಾ ನ್ಯಾಯಾಲಯವು ತನ್ನನ್ನು ಕಠೋರವಾಗಿ ನಡೆಸಿಕೊಂಡಿದೆ, ಸಂಸದನ ಸ್ಥಾನಮಾನದಿಂದ ತಾವು ಸಾರ್ವಜನಿಕವಾಗಿ ಹೆಚ್ಚು ಪ್ರಭಾವಿತವಾಗಿರುವುದಾಗಿ ರಾಹುಲ್ ಗಾಂಧಿ ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಾಟರ್ ಮೆಟ್ರೋ | ದೇಶದ ಮೊದಲ ಜಲಸಾರಿಗೆಗೆ ಪ್ರಧಾನಿ ಮೋದಿ ಇಂದು ಚಾಲನೆ ; ಏನಿದರ ವಿಶೇಷ?

ಆದಾಗ್ಯೂ, ನ್ಯಾಯಾಧೀಶ ರಾಬಿನ್ ಮೊಂಗೇರಾ ರಾಹುಲ್‌ ಗಾಂಧಿಯವರ ಮೇಲ್ಮನವಿಯನ್ನು ಒಪ್ಪಲಿಲ್ಲ. ನೀವು ಲೋಕಸಭಾ ಸದಸ್ಯರಾಗಿದ್ದವರು ಹಾಗೂ ದೇಶದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿದ್ದವರು. ಹೀಗಾಗಿ, ಪದಗಳನ್ನು ಬಳಸುವಾಗ ನೀವು (ರಾಹುಲ್) ಎಚ್ಚರದಿಂದ ಇರಬೇಕಿತ್ತು. ರಾಹುಲ್ ಅವರಂತಹ ವ್ಯಕ್ತಿಯಿಂದ ಸಭ್ಯ ನಡವಳಿಕೆಗೆ ಸಂಬಂಧಿಸಿ ಅಧಿಕ ನಿರೀಕ್ಷೆ ಇರುತ್ತದೆ. ಈ ಹಿನ್ನೆಲೆ ಕಾನೂನಿನಡಿ ಅವಕಾಶವಿರುವಷ್ಟು ಪ್ರಮಾಣದ ಶಿಕ್ಷೆಯನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ’ ಎಂದು ತಿಳಿಸಿದ್ದರು.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೊಂದು ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...