ರಾಜಿ ಮಾಡಿಕೊಂಡಿರುವ ಭಾರತದ ಚುನಾವಣಾ ಆಯೋಗ: ರಾಹುಲ್ ಗಾಂಧಿ ಆರೋಪ

Date:

ಭಾರತದ ಚುನಾವಣಾ ಆಯೋಗ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ದೋಷವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್‌ನಲ್ಲಿ ಮಾತನಾಡಿ, ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ ಎಂಬುದು ಸ್ಪಷ್ಟವಾಗಿದೆ. ನಾನು ಇದನ್ನು ಹಲವು ಬಾರಿ ಹೇಳಿದ್ದೇನೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಯಸ್ಕರ ಸಂಖ್ಯೆಗಿಂತ ಹೆಚ್ಚಿನ ಜನರು ಮತ ಚಲಾಯಿಸಿದ್ದಾರೆ. ಚುನಾವಣಾ ಆಯೋಗವು ಸಂಜೆ 5.30ಕ್ಕೆ ಅಂಕಿ-ಅಂಶಗಳನ್ನು ನೀಡಿದೆ. 5.30 ರಿಂದ 7.30ರ ನಡುವೆ 65 ಲಕ್ಷ ಮತದಾರರ ಮತದಾನದ ಅಂಕಿಅಂಶವನ್ನು ನಮಗೆ ನೀಡಿದೆ. ಇದು ಸಂಭವಿಸುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದರು.

ಓರ್ವ ಮತದಾರನಿಗೆ ಮತದಾನ ಮಾಡಲು 3 ನಿಮಿಷ ಬೇಕು, ಈಗೆ ನೋಡಿದರೆ ಮಧ್ಯರಾತ್ರಿ 2 ಗಂಟೆಯವರೆಗೆ ಮತದಾರರ ಸಾಲುಗಳು ಇರಬೇಕಿತ್ತು. ಆದರೆ ಇದು ಸಂಭವಿಸಲಿಲ್ಲ. ನಾವು ವಿಡಿಯೊ ದಾಖಲೆ ಕೇಳಿದಾಗ ಅವರು ನಿರಾಕರಿಸಿರುವುದು ಮಾತ್ರವಲ್ಲದೆ ಅವರು ಕಾನೂನನ್ನು ಬದಲಾಯಿಸಿದರು. ಇದರಿಂದ ಈಗ ನಮಗೆ ವಿಡಿಯೊ ದಾಖಲೆ ಕೇಳಲು ಅವಕಾಶವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಚುನಾವಣಾ ಆಯೋಗದ ಕುರಿತು ರಾಹುಲ್ ಗಾಂಧಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಸಿ ಆರ್ ಕೇಶವನ್, ಮತ್ತೊಂದು ಭಾರತ ಬದ್ನಾಂ ಯಾತ್ರೆ, ವಿದೇಶಿ ನೆಲದಲ್ಲಿ ಭಾರತ ನಿಂದನೆ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಭಾರತದ ಸಾಂವಿಧಾನಿಕ ಸಂಸ್ಥೆಯ ಮೇಲೆ ಮತ್ತೊಮ್ಮೆ ಶೋಚನೀಯವಾಗಿ ದಾಳಿ ನಡೆಸಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಚುನಾವಣಾ ವ್ಯವಸ್ಥೆ ಮತ್ತು ಭಾರತದ ಮತದಾರರ ನೋಂದಣಿ ಬಗ್ಗೆ ಶ್ಲಾಘಿಸುತ್ತಿರುವಾಗ ರಾಹುಲ್ ಗಾಂಧಿ ಸುಳ್ಳುಗಳನ್ನು ಹರಡುತ್ತಿದ್ದಾರೆ ಮತ್ತು ಚುನಾವಣಾ ಆಯೋಗದ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿ ಆರ್ ಕೇಶವನ್ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...