ಸೂಕ್ತ ಪ್ರತ್ಯುತ್ತರ ನೀಡಲಾಗಿದೆ: ಆಪರೇಷನ್ ಸಿಂಧೂರಗೆ ರಾಹುಲ್ ಗಾಂಧಿ, ಖರ್ಗೆ ಬೆಂಬಲ

Date:

ದೇಶದ ಸುಮಾರು 26 ಜನರನ್ನು ಬಲಿ ಪಡೆದುಕೊಂಡ ಪಹಲ್ಗಾಮ್‌ಗೆ ಪ್ರತೀಕಾರವಾಗಿ ಭಾರತೀಯ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಬಲಿಸಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಲಾಗಿದೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಬೆಳಗಿನ ಜಾವ 1.05ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ.

ಈ ದಾಳಿಯನ್ನು ನಡೆಸಿದ ಭಾರತೀಯ ಪಡೆಗಳಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ಪಕ್ಷದ ಪರವಾಗಿ, ಶುಭಾಶಯ ತಿಳಿಸಿದ್ದಾರೆ. “ಸೇನೆಗೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದ್ದಾರೆ. ಬುಧವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಸಭೆಯ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಹೇಳಿಕೆಯನ್ನು ನೀಡಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಕ್ಕೆ ‘ಆಪರೇಷನ್ ಸಿಂಧೂರ’ ನಡೆಸಿ ಸೂಕ್ತ ಪ್ರತ್ಯುತ್ತರ ನೀಡಿದ ನಮ್ಮ ಭದ್ರತಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ಗೆ ಕರೆ ಬಂದಿದ್ದು, ಗುರುವಾರ ನಿಗದಿಯಾಗಿರುವ ಸರ್ವಪಕ್ಷ ಸಭೆಗೆ ಆಹ್ವಾನಿಸಲಾಗಿದೆ. ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಾವು ಸಭೆಯಲ್ಲಿ ಭಾಗಿಯಾಗುತ್ತೇವೆ. ರಾಹುಲ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ದೇಶದ ವಿಷಯ. ನಾವು ದೇಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಇರಬೇಕು ಎಂದು ನಾವು ಮೊದಲಿನಿಂದಲೇ ಹೇಳುತ್ತಿದ್ದೇವೆ. ರಾಷ್ಟ್ರದ ಹಿತಾಸಕ್ತಿಗಾಗಿ ಯಾವುದೇ ಸಭೆಯನ್ನು ಕರೆದರೂ ಅದರಲ್ಲಿ ಭಾಗಿಯಾಗಿ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಕಾಂಗ್ರೆಸ್ ಸಭೆಯ ನಂತರ ಖರ್ಗೆ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...