ರಾಜೀವ್ ಗಾಂಧಿ ಪುಣ್ಯತಿಥಿ: ‘ಅಪ್ಪಾ… ನಿಮ್ಮ ಆಕಾಂಕ್ಷೆಗಳು, ನನ್ನ ಜವಾಬ್ದಾರಿ’ ಎಂದ ರಾಹುಲ್

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ದಿವಂಗತ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಾ, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. “ತಮ್ಮ ತಂದೆಯ ಆಕಾಂಕ್ಷೆಗಳು ತನ್ನ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಅವರು ತಮ್ಮ ತಂದೆಯೊಂದಿಗಿನ ಬಾಲ್ಯದ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಜೀವ್ ಗಾಂಧಿ ಅವರು ರಾಹುಲ್ ಅವರ ಹೆಗಲ ಮೇಲೆ ಕೈಯಿಟ್ಟಿರುವುದು, ರಾಹುಲ್ ಗಾಂಧಿ ಕೈ ಕಟ್ಟಿಕೊಂಡಿರುವುದನ್ನು ನಾವು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಂದೆ, ನಿಮ್ಮ ಕನಸುಗಳು, ನನ್ನ ಕನಸುಗಳು. ನಿಮ್ಮ ಆಕಾಂಕ್ಷೆಗಳು, ನನ್ನ ಜವಾಬ್ದಾರಿಗಳು. ನಿಮ್ಮ ನೆನಪುಗಳು, ಇಂದು ಮತ್ತು ಯಾವಾಗಲೂ, ಯಾವಾಗಲೂ ನನ್ನ ಹೃದಯದಲ್ಲಿರುತ್ತದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು

ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ರಾಹುಲ್ ಅವರು ರಾಜೀವ್ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಪಿ ಚಿದಂಬರಂ ಮತ್ತು ಸಚಿನ್ ಪೈಲಟ್ ಅವರಂತಹ ಇತರ ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ನನ್ನ ನಮನಗಳು” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

1984ರಲ್ಲಿ ತಮ್ಮ ತಾಯಿ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದರು. ಅಕ್ಟೋಬರ್ 1984 ರಲ್ಲಿ ಅಧಿಕಾರ ವಹಿಸಿಕೊಂಡರು. 40ನೇ ವಯಸ್ಸಿನಲ್ಲಿ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾದ ಹೆಗ್ಗಳಿಕೆ ರಾಜೀವ್ ಗಾಂಧಿ ಅವರದ್ದು.

ರಾಜೀವ್ ಗಾಂಧಿ ಅವರು 1989ರ ಡಿಸೆಂಬರ್ 2ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ರಾಜೀವ್ ಗಾಂಧಿಯವರು 1991ರ ಮೇ 21ರಂದು ಚುನಾವಣಾ ಪ್ರಚಾರದಲ್ಲಿರುವಾಗ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...