ನಿತೀಶ್ ಬಿಜೆಪಿ ಒಕ್ಕೂಟ ಸೇರಿದ ಪ್ರಮುಖ ಕಾರಣ ತಿಳಿಸಿದ ರಾಹುಲ್ ಗಾಂಧಿ

Date:

ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ”ನಿತೀಶ್ ಅವರು ಏಕೆ ಸಿಲುಕಿಕೊಂಡರು ಎಂಬುದು ಅರ್ಥವಾಗುತ್ತದೆ. ನಾನು ಅವರಿಗೆ ನೇರವಾಗಿ ಹೇಳುತ್ತೇನೆ. ನೀವು ಬಿಹಾರದಲ್ಲಿ ಜಾತಿ ಸಮೀಕ್ಷೆ ಕೈಗೊಂಡಿರಿ, ಆರ್‌ಜೆಡಿಯೊಂದಿಗೆ ನಾವು ಕೂಡ ಸಮೀಕ್ಷೆ ಕೈಗೊಳ್ಳುವಂತೆ ಒತ್ತಾಯಿಸಿದ್ದೆವು. ಆದರೆ ಬಿಜೆಪಿ ಭಯಕ್ಕೊಳಗಾಯಿತು. ಈ ಯೋಜನೆಗೆ ಅವರು ವಿರೋಧ ವ್ಯಕ್ತಪಡಿಸಿದರು. ನಿತೀಶ್ ಅವರು ಸಮಸ್ಯೆಗೆ ಸಿಲುಕಿ ಬಿಜೆಪಿ ಒದಗಿಸಿದ ಹಿಂಬಾಗಿಲಿನ ಮೂಲಕ ಓಡಿ ಹೋಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ಇಂಡಿಯಾ ಒಕ್ಕೂಟದ ಜವಾಬ್ದಾರಿಯಾಗಿದೆ. ಇದಕ್ಕಾಗಿ ನಿತೀಶ್ ಅವರ ಬೆಂಬಲ ಅಗತ್ಯವಿಲ್ಲ. ಜಾತಿ ಸಮೀಕ್ಷೆಯ ಒತ್ತಡ ವಿಪಕ್ಷಗಳಿಗೆ ಇಷ್ಟವಾಗದ ಕಾರಣ ನಿತೀಶ್ ಸ್ವಲ್ಪ ಒತ್ತಡಕ್ಕೊಳಗಾಗಿ ಪಕ್ಷಾಂತರ ಮಾಡಿದ್ದಾರೆ. ಅವರಿಗೆ ಒತ್ತಡ ಮುಖ್ಯವಾಗಿದೆ. ಆದರೆ ನಮ್ಮ ಒಕ್ಕೂಟ ಜನರ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಇದೇ ಸಂದರ್ಭದಲ್ಲಿ ನಿತೀಶ್ ಅವರ ಬಗ್ಗೆ ರಾಹುಲ್ ಅವರು ಹಾಸ್ಯ ಚಟಾಕಿ ಹಾರಿಸಿದರು. ”ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿ ರಾಜಭವನದಿಂದ ತಕ್ಷಣ ತೆರಳಿದರು. ಕಾರಿನಲ್ಲಿ ಅವರು ತಮ್ಮ ಶಾಲು ಮರೆತಿದ್ದರು ತಮ್ಮ ಚಾಲಕನಿಗೆ ಹೇಳಿ ಶಾಲನ್ನು ವಾಪಸ್ ತರಿಸಿಕೊಂಡರು. ಮತ್ತೆ ರಾಜ ಭವನಕ್ಕೆ ತೆರಳಿದಾಗ, ಏಕೆ ಇಷ್ಟು ತರಾತುರಿಯಲ್ಲಿ ವಾಪಸ್ ಬಂದಿರಿ ಎಂದು ರಾಜ್ಯಪಾಲರು ಪ್ರಶ್ನಿಸಿದರು” ಎಂದು ರಾಹುಲ್ ಹೇಳಿದರು.

ನಿತೀಶ್ ಕುಮಾರ್ ಅವರು ಭಾನುವಾರ ದಾಖಲೆಯ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು  ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...