ರಾಹುಲ್ ಬೆಂಗಾವಲು ವಾಹನಕ್ಕೆ ಬಿಜೆಪಿ ಕಾರ್ಯಕರ್ತರಿಂದ ತಡೆ; ‘ಹೈಡ್ರೋಜನ್ ಬಾಂಬ್ ಸಿಡಿಯಲಿದೆ ಎಂದ ಕಾಂಗ್ರೆಸ್‌ ನಾಯಕ

Date:

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ತಡೆಯೊಡ್ಡಿದ ಘಟನೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಇಂದು ನಡೆದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿಗೆ ನಿಂದನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆ ಕೇಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆದರೆ ಉತ್ತರ ಪ್ರದೇಶ ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ವಿಫಲರಾದರು. ಕಡಿಮೆ ಸಂಖ್ಯೆಯ ಪೊಲೀಸರಿದ್ದ ಕಾರಣ ವಿರೋಧಪಕ್ಷದ ನಾಯಕನ ವಿರುದ್ಧ ಬೇಕಂತಲೇ ದಾಳಿ ನಡೆಸಲಾಗಿದೆ ಎಂಬ ಅನುಮಾನ ಮೂಡಿದೆ. ಇದು ವಿರೋಧಪಕ್ಷದ ನಾಯಕನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಹುಲ್ ಗಾಂಧಿ ಅವರು ಹರ್ಚಂದ್‌ಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಥ್ವಾರಾ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ಪ್ರತಿಭಟನೆಯ ನಡುವೆಯೂ ರಾಹುಲ್ ಗಾಂಧಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮತ ಕಳವು ಮಾಡಿದವರೆ ಅಧಿಕಾರದಿಂದ ತೊಲಗಿ. ನಾನು ವೋಟ್ ಚೋರಿಯನ್ನು ವಿವಿಧ ರೂಪಗಳಲ್ಲಿ ಸಾಬೀತುಪಡಿಸುತ್ತೇನೆ” ಎಂದು ಹೇಳಿದರು. ಇದರೊಂದಿಗೆ ಹೈಡ್ರೋಜನ್ ಬಾಂಬ್ ಲೋಡಿಂಗ್ ಆಗುತ್ತಿದೆ. ಶೀಘ್ರದಲ್ಲೇ ಹೊರ ಬರಲಿದೆ ಎಂಬ ಸೂಚನೆ ನೀಡಿದರು. ರಾಹುಲ್‌ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ರಾಹುಲ್‌ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ರಾಹುಲ್ ಗಾಂಧಿ ಅವರು ಹರ್ಚಂದ್‌ಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಥ್ವಾರಾ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವವನ್ನು ಉತ್ತರ ಪ್ರದೇಶದ ಸಚಿವ ದಿನೇಶ್ ಪ್ರತಾಪ್ ಸಿಂಗ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ” ರಾಹುಲ್‌ ದೇಶದ ತಾಯಂದಿರಿಂದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...