ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

Date:

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಬೇಕು, ವಿಭಜನೆಗಳನ್ನು ಸೃಷ್ಟಿಸಬಾರದು ಎಂದು ಭಾನುವಾರ, ಸಿಪಿಐ(ಎಂ) ರಾಜ್ಯಸಭೆಯ ಸದನದ ನಾಯಕ ಜಾನ್ ಬ್ರಿಟ್ಟಾಸ್ ಹೇಳಿದ್ದಾರೆ.

ಇನ್ನು ರಾಹುಲ್ ಹೇಳಿಕೆ ವಿರುದ್ಧ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಹುಲ್ ಅವರ ಹೆಚ್ಚಿನ ತಂಡ ಬಿಜೆಪಿಯನ್ನು ಸೇರಿದೆ. ಹಾಗಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಅವರು ಕೇಡರ್‌ಗಳ ಪ್ರಮುಖ ಪೂರೈಕೆದಾರರು ಎಂದು ಪರಿಗಣಿಸಬಹುದು. ಆದ್ದರಿಂದ ಎಡ ಮತ್ತು ಆರ್‌ಎಸ್‌ಎಸ್ ಅನ್ನು ಹೋಲಿಸಬೇಡಿ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಸಿಪಿಐ(ಎಂ)ಗೆ ಎಂ ಎ ಬೇಬಿ ಸಾರಥ್ಯ; ಪಕ್ಷವನ್ನು ತಳಮಟ್ಟದಿಂದ ಕಟ್ಟುವರೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಶುಕ್ರವಾರ ಕೇರಳದಲ್ಲಿ ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ಮತ್ತು ಸಿಪಿಐ(ಎಂ) ಎರಡೂ “ಜನರ ಬಗ್ಗೆ ಯಾವುದೇ ಭಾವನೆಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು. ಈ ಹೇಳಿಕೆಯನ್ನು ಸಿಪಿಐಎಂ ಖಂಡಿಸಿದ್ದು, ಈ ಹೇಳಿಕೆ ಅಸಂಬದ್ಧ ಎಂದಿದೆ. ಕಾಂಗ್ರೆಸ್ ಮತ್ತು ಸಿಪಿಐಎಂ ಇಂಡಿಯಾ ಬಣಕ್ಕೆ ಸೇರಿದ್ದರೂ ಕೇರಳದಲ್ಲಿ ಪರಸ್ಪರ ವಿರುದ್ದವಾಗಿ ಸ್ಪರ್ಧಿಸುತ್ತದೆ.

ರಾಹುಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬ್ರಿಟ್ಟಾಸ್, “ಜಾತ್ಯತೀತ ಶಕ್ತಿಗಳ ನಡುವೆ ಗೊಂದಲ ಮತ್ತು ವಿಭಜನೆಯನ್ನು ಸೃಷ್ಟಿಸುವ ಬದಲು ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವುದು ಲೋಕಸಭೆ ವಿಪಕ್ಷ ನಾಯಕರ ಮುಖ್ಯ ಕೆಲಸವಾಗರಬೇಕು. ಗೋಡೆಯ ಮೇಲಿನ ಬರವಣಿಯನ್ನು ಅರ್ಥಮಾಡಿಕೊಳ್ಳುವಷ್ಟು ಅವರು ಪ್ರಬುದ್ಧರಾಗಿದ್ದಾರೆ ಎಂದು ನಾವು ಭಾವಿಸುತ್ತೇವೆ. ಕಾಂಗ್ರೆಸ್‌ನ ರಾಜ್ಯ ಘಟಕವು ವಾಸ್ತವವಾಗಿ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಲ್ಲ. ಅವರು ಕೇರಳದಲ್ಲಿ ಬಿಜೆಪಿ ಮೈತ್ರಿಕೂಟದ ಭಾಗವಾಗಿದ್ದಾರೆ” ಎಂದು ದೂರಿದರು.

ಇನ್ನು ಸಿಪಿಐ ನಾಯಕ ಸಂದೋಷ್ ಕುಮಾರ್, “ರಾಹುಲ್ ಇಂಡಿಯಾ ಒಕ್ಕೂಟದ ನಾಯಕರಾಗಿರುವ ಕಾರಣ ಸ್ವಲ್ಪ ಮಟ್ಟಿಗೆ ಪ್ರಬುದ್ಧತೆಯನ್ನು ತೋರಿಸಬೇಕು. ಯಾವುದೇ ಸಂವೇದನಾಶೀಲ ವ್ಯಕ್ತಿ ಆರ್‌ಎಸ್‌ಎಸ್ ಅನ್ನು ಎಡ ಪಕ್ಷಗಳೊಂದಿಗೆ ಹೋಲಿಸಲು ಸಾಧ್ಯವಿಲ್ಲ. ರಾಹುಲ್ ಅವರು ಮಾತನಾಡುವಾಗಲೆಲ್ಲಾ ಅವರು ಯಾವಾಗಲೂ ಸ್ವಲ್ಪ ಮಟ್ಟಿಗೆ ಅಪ್ರಬುದ್ಧರು ಎಂಬುದನ್ನು ತೋರಿಸುತ್ತದೆ. ರಾಹುಲ್ ಅವರಿಗೆ ಕಾಂಗ್ರೆಸ್ ಸಲಹೆ ನೀಡಬೇಕು” ಎಂದು ಹೇಳಿದ್ದಾರೆ.

ಇನ್ನು ಎಡಪಕ್ಷ ನಾಯಕರು ಮತ್ತು ರಾಹುಲ್ ಇಂಡಿಯಾ ನಾಯಕರ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರೂ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ. ಆದರೆ ಸಿಪಿಐ ನಾಯಕ ಡಿ.ರಾಜಾ ಅವರು ರಾಹುಲ್ ಹೆಸರು ಉಲ್ಲೇಖಿಸದೆಯೇ “ಯಾರೂ ಎಡ ಮತ್ತು ಆರ್‌ಎಸ್‌ಎಸ್ ಅನ್ನು ಹೋಲಿಸಬಾರದು” ಎಂದು ಹೇಳಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...