ಪ್ರತಿಭಟನೆಯಲ್ಲಿ ಗಾಯಗೊಂಡ ರೈತನೊಂದಿಗೆ ಮಾತನಾಡಿದ ರಾಹುಲ್; ಮೋದಿ ಸರ್ಕಾರದ ವಿರುದ್ಧ ಆಕ್ರೋಶ

Date:

ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಪಂಜಾಬ್‌ – ಹರಿಯಾಣ ಗಡಿಯಲ್ಲಿ ಪೊಲೀಸ್‌ ದಾಳಿಯಿಂದ ಗಾಯಗೊಂಡಿದ್ದ ರೈತರೊಬ್ಬರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.

ಫೆ.13ರ ಮಂಗಳವಾರ ರಾತ್ರಿ ದೂರವಾಣಿಯೊಂದಿಗೆ ಗಾಯಗೊಂಡು ಪಂಜಾಬ್‌ನ ಪಾಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಮೀತ್ ಸಿಂಗ್ ಎಂಬ ರೈತರೊಬ್ಬರ ಜೊತೆ ರಾಹುಲ್ ಗಾಂಧಿ ಮಾತನಾಡಿದರು.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ರೈತ ಚಳವಳಿ ಸಂದರ್ಭ ಪೊಲೀಸ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗುರುಮೀತ್ ಸಿಂಗ್ ಅವರೊಂದಿಗೆ ನಾನು ಮಾತನಾಡಿ ಆರೋಗ್ಯವನ್ನು ವಿಚಾರಿಸಿದೆ. ಅವರ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವರು ಯುವಕರಷ್ಟೆ ಅಲ್ಲ, ರೈತರೂ ಹೌದು. ದೇಶದ ರಕ್ಷಕರು ಹಾಗೂ ಅನ್ನದಾತರಾದ ಇಂತಹವರನ್ನು ಪ್ರೋತ್ಸಾಹಿಸುವ ಬದಲು ಮೋದಿ ಸರ್ಕಾರ ಸರ್ವಾಧಿಕಾರದಂತೆ ವರ್ತಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ನಾವು ನಿಮ್ಮ ಜೊತೆ ಇದ್ದೇವೆ. ಚಿಂತಿಸಬೇಡಿ. ದೇಶಕ್ಕೆ ಯಾವುದು ಮುಖ್ಯವಾಗಿದೆಯೋ ಅದಕ್ಕಾಗಿಯೆ ನೀವು ಹೋರಾಡುತ್ತಿದ್ದೀರಿ. ನೀವು ಈ ಮೊದಲು ದೇಶಕ್ಕಾಗಿ ಸೇವೆ ಸಲ್ಲಿಸಿದ್ದೀರಿ.ಈಗಲೂ ಸಹ ಅದೇ ಕೆಲಸ ಮಾಡುತ್ತಿದ್ದೀರಿ. ನಿಮಗೆ ಒಳ್ಳೆಯದಾಗಲಿ” ಎಂದು ಶುಭ ಕೋರಿದರು.

ಪಂಜಾಬ್‌ – ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿನ್ನೆ(ಫೆ.13) ಪೊಲೀಸರು ಬಲವಂತವಾಗಿ ತಡೆದ ನಂತರ ಒಂದು ದಿನದ ಮಟ್ಟಿಗೆ ವಿರಾಮ ಘೋಷಿಸಲಾಗಿತ್ತು. ಇಂದು ಮತ್ತೆ ದೆಹಲಿ ಚಲೋ ಪುನರಾರಂಭಗೊಂಡಿದೆ.

ನಿನ್ನೆ ಪಂಜಾಬ್‌ – ಹರಿಯಾಣದ ಶಂಭೂ ಗಡಿಯಲ್ಲಿ ಪೊಲೀಸರು ನಿರ್ಮಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಪ್ರತಿಭಟನಾನಿರತಾ ರೈತರು ಮುನ್ನುಗ್ಗಲು ದೆಹಲಿಯತ್ತ ಸಾಗಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ರೈತರ ಮೇಲೆ ಬಲವಂತವಾಗಿ ಅಶ್ರುವಾಯು, ಸ್ಮೋಕ್‌ ಬಾಂಬ್‌, ಜಲ ಪಿರಂಗಿಗಳನ್ನು ಬಳಸಿದರು.

ಪೊಲೀಸರು ನಡೆಸಿದ ಅಶ್ರುವಾಯು ಶೆಲ್‌ ಸಿಡಿತದಲ್ಲಿ 70ಕ್ಕೂ ಹೆಚ್ಚು ಮಂದಿ ರೈತರು ಗಾಯಗೊಂಡಿದ್ದಾರೆ. ಅಲ್ಲದೆ ಅಂಬಾಲಾ ಗಡಿಯಲ್ಲಿ ಕೆಲ ರೈತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...