ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ರೈಲ್ವೇ ಪೊಲೀಸರು; ಆರೋಪ

Date:

ಛತ್ತೀಸ್‌ಗಢದ ರಾಯ್‌ಗರ್ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕನನ್ನು ರೈಲ್ವೇ ಪೊಲೀಸರು (ಜಿಆರ್‌ಪಿ) ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಮೃತ ಕಾರ್ಮಿಕನನ್ನು ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ ಪ್ರದೇಶದ ನಿವಾಸಿ ರಾಮದಯಾಳ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಅವರು ತನ್ನ ಮಗನೊಂದಿಗೆ ದೆಹಲಿಗೆ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಆಗ್ರಾ ಮತ್ತು ಮಥುರಾ ನಡುವೆ ಆತನ ಮೇಲೆ ರೈಲ್ವೇ ಪೊಲೀಸರು ಹಲ್ಲೆ ನಡೆಸಿದ್ದು, ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತ ಕಾರ್ಮಿಕನ ಮಗ ವಿಶಾಲ್ ಅಹಿರ್ವಾರ್ ಹೇಳುವಂತೆ; ಟಿಕಮ್‌ಗಢದಿಂದ ಲಲಿತ್‌ಪುರಕ್ಕೆ ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ತಂದೆ-ಮಗ ಬಂದಿದ್ದಾರೆ. ಬಳಿಕ, ಅಲ್ಲಿ, ದೆಹಲಿಗೆ ತೆರಳಲು ಗೊಂಡ್ವಾನ ಎಕ್ಸ್‌ಪ್ರೆಸ್‌ನ ಜನರಲ್ ಬೋಗಿಯನ್ನು ಹತ್ತಿದ್ದಾರೆ. ರೈಲು ಆಗ್ರಾ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ಬಳಿಕ ಕಾರ್ಮಿಕ ರಾಮದಯಾಳ್‌ ಧೂಮಪಾನ ಮಾಡಲು ಬೀಡಿ ಹಚ್ಚಿದ್ದಾರೆ. ಆಗ, ಅಲ್ಲಿಗೆ ಬಂದ ಜಿಆರ್‌ಪಿ ಕಾನ್‌ಸ್ಟೇಬಲ್‌ಗಳು ಕಾರ್ಮಿಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲ್ಲೆ ಮಾಡುವುದನ್ನು ನಿಲ್ಲಿಸಲು ಎಷ್ಟೇ ಮನವಿ ಮಾಡಿದರೂ ಕಿವಿಗೊಡದ ಕಾನ್‌ಸ್ಟೇಬಲ್‌ಗಳು ಥಳಿಸುವುದನ್ನು ಮುಂದುವರೆಸಿದರು. ಜನರಲ್ ಬೋಗಿಯಿಂದ ಸ್ಲೀಪರ್‌ಗೆ ಬೋಗಿಗೆ ಎಳೆದೊಯ್ದು ಅಲ್ಲಿಯೂ ಹೊಡೆದರು. ರಾಮದಯಾಳ್ ಅವರ ಆರೋಗ್ಯ ಹದಗೆಟ್ಟಾಗ, ಕಾನ್‌ಸ್ಟೇಬಲ್‌ಗಳು ಮಥುರಾದ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರು. ರಾಮದಯಾಳ್ ಅವರ ಮೃತದೇಹದೊಂದಿಗೆ ಮಥುರಾದಲ್ಲಿ ಕಾನ್‌ಸ್ಟೇಬಲ್‌ಗಳು ಇಳಿದುಕೊಂಡರು. ಸ್ಥಳಕ್ಕೆ ಬಂದ ವೈದ್ಯರು, ತಮ್ಮ ತಂದೆ ಮೃತಪಟ್ಟಿರುವುದಾಗಿ ಘೋಷಿಸಿದರು” ಎಂದು ಮೃತ ಕಾರ್ಮಿಕನ ಮಗ ವಿಶಾಲ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಬಿಜೆಪಿಗೆ ವರ್ತಮಾನದ ಸಭ್ಯತೆಯೂ ಇಲ್ಲ, ಇತಿಹಾಸದ ಜ್ಞಾನವೂ ಇಲ್ಲ

ಮಥುರಾದ ರೈಲ್ವೆ ಪೊಲೀಸರು (GRP) ಮೃತದೇಹವನ್ನು ವಶಕ್ಕೆ ತೆಗೆದುಕೊಂಡು ಪಂಚನಾಮೆ ನಡೆಸಿದ್ದಾರೆ. ಬಳಿಕ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...