ರಾಜ್ಯದಾದ್ಯಂತ ಶೀತಗಾಳಿ: 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜ. 9ರವರೆಗೆ ಮಳೆ!

Date:

ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದ್ದು, ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದಾರು ದಿನಗಳ ಕಾಲ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7 ರಿಂದ 9 ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ವಿಜಯಪುರದಲ್ಲಿ 11.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಇಂದು ನಸುಕಿನ ವೇಳೆ ಮಳೆ ಸುರಿದಿರುವುದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮುಸ್ಸಂಜೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಕೆಲವೆಡೆ ರಾತ್ರಿಯಿಂದಲೇ ತುಂತುರು ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಗುಡುಗು ಸಹಿತ ತುಂತುರು ಮಳೆಯಾಗಿದೆ.

ನಗರ ಹೊರವಲಯದ ಉಳ್ಳಾಲ, ಕೊಣಾಜೆ, ಮುಡಿಪು, ಮಂಜನಾಡಿ ಸೇರಿದಂತೆ ಹಲವೆಡೆ ಇಂದು ಬೆಳಗ್ಗೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ.

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದ್ದರೆ, ಬೆಳ್ತಂಗಡಿಯಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಮಳೆಮಳೆ ಸುರಿಯುತ್ತಿರುವುದು ವರದಿಯಾಗಿದೆ. ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಉಡುಪಿ ಜಿಲ್ಲೆಯಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ಬಳಿಕ ಹಲವೆಡೆ ತುಂತುರು ಮಳೆ ಸುರಿದಿದೆ. ಬೆಳಗ್ಗೆ 9 ಗಂಟೆ ಕಳೆದರೂ ಮೋಡದ ವಾತಾವರಣ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...