ತಮಿಳುನಾಡಿನಲ್ಲಿ ಮಳೆ: ಕೆಲವು ಜಿಲ್ಲೆಗಳ ಶಾಲಾಕಾಲೇಜುಗಳಿಗೆ ರಜೆ

Date:

ತಮಿಳುನಾಡಿನ ಚೆನ್ನೈ ಒಳಗೊಂಡು ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.

ಚೆನ್ನೈ ಹಾಗೂ ಸುತ್ತಮುತ್ತಲ ಜಿಲ್ಲೆಗಳಾದ ಚಂಗಲ್‌ಪಟ್ಟು, ಕಾಂಚೀಪುರಂ, ವೇಲುಪುರಂ ಕಲ್ಲಕುರುಚಿ, ಕುಡ್ಡಲೋರು, ನಾಗಪಟ್ಟನಂ ಹಾಗೂ ತಿರುವರೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಸೋಮವಾರವು ಮಳೆಯ ಮುನ್ಸೂಚನೆ ಅರಿತ ಈ ಜಿಲ್ಲೆಯ ಶಾಲಾಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಈ ಭಾಗಗಳಲ್ಲಿ ಜನವರಿ 7ರ ಮುಂಜಾನೆ 8.30 ರಿಂದ ಜನವರಿ 8ರ 5.30ರ ತನಕ ಈ ಭಾಗಗಳಲ್ಲಿ 167ಮಿಮಿ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ಪುದುಚೆರಿ ಭಾಗದ ಕರೈಕ್ಕಾಲ್ ಭಾಗದಲ್ಲಿ 122 ಮಿಮಿ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಮುಖ್ಯಮಂತ್ರಿ ಎನ್‌ ರಂಗಸ್ವಾಮಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಭಾರಿ ಮಳೆಯ ಹಿನ್ನೆಲೆಯಲ್ಲಿ ಅಣ್ಣಾಮಲೈ ವಿಶ್ವವಿದ್ಯಾಲಯವು ಇಂದು (ಜನವರಿ 8) ರಜೆ ಘೋಷಿಸಿದ್ದು, ಸುತ್ತೋಲೆಯ ಪ್ರಕಾರ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಏಳು ದಿನಗಳಲ್ಲಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಮಾಮಾನ ಇಲಾಖೆಯು ಭಾನುವಾರ(ಜನವರಿ 7) ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವುದಾಗಿ ಮುನ್ಸೂಚನೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...