ರಾಜಸ್ಥಾನ | ದಲಿತ ಯುವಕನ ಮೇಲೆ ಹಲ್ಲೆ, ಮೂತ್ರ ವಿಸರ್ಜಿಸಿ ವಿಕೃತಿ

Date:

ದಲಿತ ಯುವಕನ ಮೇಲೆ ಪ್ರಬಲ ಜಾತಿ ಇಬ್ಬರು‌ ವ್ಯಕ್ತಿಗಳು ಹಲ್ಲೆ ನಡೆಸಿ, ಆತನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.

ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ಏಪ್ರಿಲ್ 8ರಂದು ಘಟನೆ ನಡೆದಿದೆ. ಸಂತ್ರಸ್ತ ಯುವಕ‌ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

“ಏಪ್ರಿಲದ 8ರಂದು ಗ್ರಾಮದಲ್ಲಿ ಮದುವೆ ಮೆರವಣಿಗೆ ವೀಕ್ಷಿಸಲು ಹೋಗಿದ್ದೆ. ಆಗ ಇಬ್ಬರು ಆರೋಪಿಗಳು ಕೆಲಸದ ನೆಪವೊಡ್ಡಿ ನನ್ನನ್ನು ಕರೆದೊಯ್ದರು. ನಿರ್ಜನ ಪ್ರದೇಶದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದರು. ಅಸ್ವಭಾವಿಕ ಲೈಂಗಿಕ ಕ್ರಿಯೆಗೂ ಯತ್ನಿದರು. ಜಾತಿ ನಿಂದನೆ ಮಾಡಿ, ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದರು” ಎಂದು ಸಂತ್ರಸ್ತ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಗಳು ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಯುವಕ ತಿಳಿಸಿದ್ದಾರೆ.

“ಸಂತ್ರಸ್ತ ಯುವಕನ ದೂರು ದಾಖಲಿಸಿದ ಬಳಿಕ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದೇವೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ (ಡಿಎಸ್‌ಪಿ) ಅರವಿಂದ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...