ಆಕ್ಷೇಪಾರ್ಹ ವಿಡಿಯೋ ವೈರಲ್; ಸಾಧ್ವಿ ಪ್ರೇಮ್‌ ಬೈಸಾ ನಿಗೂಢ ಸಾವು

Date:

ಇತ್ತೀಚೆಗೆ ಆಕ್ಷೇಪಾರ್ಹ ವಿಡಿಯೋ ವೈರಲ್‌ ಆಗಿದ್ದರಿಂದ ನೊಂದಿದ್ದ ಮತ್ತು ತಾವು ಯಾವುದೇ‌ ತಪ್ಪು ಮಾಡಿಲ್ಲ. ತಮ್ಮ ಮುಗ್ದತೆಯನ್ನು ಸಾಬೀತುಪಡಿಸಲು ಯಾವುದೇ ಅಗ್ನಿಪರೀಕ್ಷೆಗೆ ಒಳಗಾಗಲು ಸಿದ್ದನಿದ್ದೇನೆ ಎಂದಿದ್ದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಟವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಸ್ಥಾನದ ಜೋಧ್‌ಪುರದ ಬೋರನಾಡ ಆಶ್ರಮದ ಧಾರ್ಮಿಕ ಪ್ರಚಾರಕಿಯಾಗಿದ್ದ ಸಾಧ್ವಿ ಪ್ರೇಮ್ ಬೈಸಾ (25) ಅವರ ಹಠಾತ್ ಸಾವು ನಾನಾ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆ, ಬೈಸಾ ಅವರು ತನ್ನ ಗುರು ಸ್ವಾಮೀಜಿಯೋರ್ವರನ್ನು ತಬ್ಬಿ, ಮುತ್ತುಕೊಡುತ್ತಿರುವ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ಹೊರಬಂದ ಬಳಿಕ ಸಾಧ್ವಿಗೆ ಪ್ರತಿದಿನ ಚಿತ್ರಹಿಂಸೆ ನೀಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಪ್ರಕರಣವೂ ದಾಖಲಾಗಿತ್ತು. ತನ್ನ ಮುಗ್ಧತೆಯನ್ನು ಸಾಬೀತುಪಡಿಸಲು ಯಾವುದೇ ಕಠಿಣ ಪರೀಕ್ಷೆಗೆ ಒಳಗಾಗಲು ಸಿದ್ಧನಿದ್ದೇನೆ ಎಂದು ಬೈಸಾ ಹೇಳಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಅವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸಾಮಾಜಿಕ‌ ಜಾಲತಾಣ ಖಾತೆಯಲ್ಲಿ ಪೋಸ್ಟ್‌ವೊಂದು ಪ್ರಕಟವಾಗಿದ್ದು, ತಮ್ಮ‌ ಸಾವಿನ ಬಳಿಕವಾದರೂ, ನ್ಯಾಯ ಸಿಗುತ್ತದೆ ಎಂದು ಬರೆಯಲಾಗಿದೆ. ಈ ಪೋಸ್ಟ್ ಅವರ ಸಾವಿನ‌ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

“ಸಾಧ್ವಿ ಕುಸಿದು ಬಿದ್ದರು, ಅವರನ್ನು‌ ಕಾರಿನಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಆಕೆ ಮೃರಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, “ಸಾಧ್ವಿ ಜ್ವರದಿಂದ ಬಳಲುತ್ತಿದ್ದರು. ಆಶ್ರಮದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆಶ್ರಮಕ್ಕೆ ಕರೆಸಲಾಗಿದ್ದ ಕಾಂಪೌಂಡರ್ ನೀಡಿದ ಇಂಜೆಕ್ಷನ್ ನಂತರ ಆಕೆ ಕುಸಿದು ಬಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಆಶ್ರಮದಲ್ಲಿ ಪ್ರತಿಭಟನೆಗೆ ಕಾರಣವಾಗಿದೆ. ಸಾವಿರಾರು ಭಕ್ತರು ಜಮಾಯಿಸಿ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...