ಭೂ ಒತ್ತುವರಿ ಆರೋಪ: ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪಂಚಾಯತಿ

Date:

ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ಕಾರಣಕ್ಕಾಗಿ, ಕುಟುಂಬವೊಂದಕ್ಕೆ ಗ್ರಾಮ ಪಂಚಾಯತಿಯು ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಖಾಪ್​ ಪಂಚಾಯತಿಯು ರತಲ್ ಲಾಲ್ ಎಂಬವರ ಕುಟುಂಬಕ್ಕೆ ಬಹಿಷ್ಕಾರ ಹಾಕಿದೆ. ಮಾತ್ರವಲ್ಲದೆ, ಅವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಿದರೆ, ಅವರಿಗೆ 1 ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದೆ.

ಸಂತ್ರಸ್ತ ರತನ್ ಲಾಲ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪ್ರಕರಣ ಬೆಳಕಿಗೆ ಬಂದಿದೆ‌. ಆದರೆ, ದೂರು ನೀಡಿ ಒಂದು ವಾರಕ್ಕೂ ಹೆಚ್ಚು ಸಮಯವಾಗಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರತನ್ ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ಅಭಿಪ್ರಾಯಗಳನ್ನು ಕೇಳದೆಯೇ ಸಾಮಾಜಿಕ ಬಹಿಷ್ಕರ ಹಾಕಲಾಗಿದೆ. ಇದು ನಮಗೆ ಮಾನಸಿಕ ಮತ್ತು ಸಾಮಾಜಿಕ ಕಿರುಕುಳ ಉಂಟುಮಾಡಿದೆ” ಎಂದು ರತನ್ ಹೇಳಿಕೊಂಡಿದ್ದಾರೆ.

“ಗ್ರಾಮದಿಂದ ಹೊರಹಾಕಲ್ಪಟ್ಟಾಗಿನಿಂದ ನಾನು ಮತ್ತು ನನ್ನ ಇಡೀ ಕುಟುಂಬವು ನೋವು ಅನುಭವಿಸುತ್ತಿದೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂಬುದನ್ನು ತಿಳಿದ ಕೆಲವು ಗ್ರಾಮಸ್ಥರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕುಟುಂಬ ಇನ್ನಷ್ಟು ಆಘಾತಕ್ಕೆ ಒಳಗಾಗಿದೆ. ನಮಗೆ ನ್ಯಾಯ ಒದಗಿಸಬೇಕು. ಬಹಿಷ್ಕರ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಅವರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...