ಕಳ್ಳತನದ ಆರೋಪ | ಕಾರ್ಮಿಕರ ಉಗುರು ಕಿತ್ತು, ವಿದ್ಯುತ್ ಶಾಕ್ ನೀಡಿ ವಿಕೃತಿ

Date:

ಹಣ ಕದ್ದಿದ್ದಾರೆಂಬ ಆರೋಪದ ಮೇಲೆ ಇಬ್ಬರು ಕಾರ್ಮಿಕರ ಮೇಲೆ ಕಾರ್ಖಾನೆ ಮಾಲೀಕ ವಿಕೃತವಾಗಿ ದೌರ್ಜನ್ಯ ನಡೆಸಿರುವ ಅಮಾನವೀಯ ಘಟನೆ ಛತ್ತೀಸ್‌‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

ಕೊರ್ಬಾ ಜಿಲ್ಲೆಯ ಖಾಪ್ರಭಟ್ಟಿ ಪ್ರದೇಶದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಅಭಿಷೇಕ್ ಭಾಂಬಿ ಮತ್ತು ವಿನೋದ್ ಭಾಂಬಿ ಎಂಬರ ಮೇಲೆ ಮಾಲೀಕ ಚೋಟು ಗುರ್ಜರ್ ಎಂಬಾತ ದೌರ್ಜನ್ಯ ಎಸಗಿದ್ದಾನೆ. ಕಾರ್ಮಿಕರ ಉಗುರು ಕಿತ್ತು, ಅರೆಬೆತ್ತಲೆಗೊಳಿಸಿ, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ಟಿದ್ದಾನೆ.

ಇತ್ತೀಚೆಗೆ, ಅಭಿಷೇಕ್ ತನ್ನ ವಾಹನ ನಿರ್ವಹಣೆಗಾಗಿ ಮಾಲೀಕನ ಬಳಿ 20,000 ರೂ. ಮುಂಗಣ ಹಣ ಕೇಳಿದ್ದರು. ಆದರೆ, ಹಣ ಕೊಡಲು ಮಾಲೀಕ‌ ನಿರಾಕರಿಸಿದ್ದರು. ಹೀಗಾಗಿ, ಕೆಲಸ ಬಿಡುವುದಾಗಿ ಅಭಿಷೇಕ್ ಹೇಳಿದ್ದರು. ಇದರಿಂದ ವಿಚಲಿತಗೊಂಡಿದ್ದ. ಮಾಲೀಕ, ಕೆಲ ದಿನಗಳ ಬಳಿಕ ಅಭಿಷೇಕ್ ಮತ್ತು ವಿನೋದ್ ಮೇಲೆ‌ ಕಳ್ಳತನದ ಆರೋಪ ಹೊರಿಸಿ, ದೌರ್ಜನ್ಯ ಎಸಗಿ ವಿಕೃತಿ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಖಾನೆಯ ಮಾಲೀಕ ಚೋಟು ಗುರ್ಜಾರ್ ಮತ್ತು ಆತನ ಸಹಾಯಕ ಮುಖೇಶ್ ಶರ್ಮಾ – ಇಬ್ಬರೂ ಸೇರಿ ಕಾರ್ಮಿಕರನ್ನು ಅರೆಬೆತ್ತಲೆಗೊಳಿಸಿ, ಅಮಾನುಷವಾಗಿ ಥಳಿಸಿ, ಅವರ ಕೈಗಳ ಉಗುರು ಕಿತ್ತು, ವಿದ್ಯುತ್ ಶಾಕ್ ಕೊಟ್ಟು ದೌರ್ಜನ್ಯ ಎಸಗಿದ್ದಾರೆ.

ಸಂತ್ರಸ್ತ ಕಾರ್ಮಿಕರು ಗುಲಾಬ್ಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಕೊರ್ಬಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಾಗ್ಯೂ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಎಸ್‌ಎಚ್‌ಒ ಪ್ರಮೋದ್ ದಡ್ಸೆನಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...