ರಾಜಸ್ಥಾನ | ಸರ್ಕಾರಿ ಗಣಿಯಲ್ಲಿ ಲಿಫ್ಟ್ ಕುಸಿತ: 8 ಅಧಿಕಾರಿಗಳ ರಕ್ಷಣೆ; 7 ಮಂದಿ ರಕ್ಷಣೆಗೆ ಕಾರ್ಯಾಚರಣೆ

Date:

ಮಂಗಳವಾರ ರಾತ್ರಿ ರಾಜಸ್ಥಾನದಲ್ಲಿರುವ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಗಣಿಯಲ್ಲಿ ಲಿಫ್ಟ್‌ ಕುಸಿದು ಬಿದ್ದಿದ್ದು, 15 ಮಂದಿ ಅಧಿಕಾರಿಗಳು ಗಣಿಯಲ್ಲಿ ಸಿಕ್ಕಿಕೊಂಡಿದ್ದರು. ಅವರಲ್ಲಿ, 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದ 7 ಮಂದಿಯ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಪಂಜರದ (ಲಿಫ್ಟ್‌) ಹಗ್ಗ ತುಂಡಾದ ಪರಿಣಾಮ, ಅದರಲ್ಲಿ ಅಧಿಕಾರಿಗಳು ಗಣಿಯೊಳಗೆ ಸಿಕ್ಕಿಕೊಂಡಿದ್ದರು. ಮೊದಲ ಸುತ್ತಿನಲ್ಲಿ ಮೂವರನ್ನು ರಕ್ಷಿಸಿ ಗಣಿಯಿಂದ ಹೊರ ಕರೆತರಲಾಯಿತು. ಎರಡನೇ ಸುತ್ತಿನಲ್ಲಿ ಇನ್ನೂ ಐವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಿಸಲಾದ ಗಾಯಾಳುಗಳನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವ್ಯಕ್ತಿಗಳನ್ನು ಸಹ ಸುಮಾರು ಎರಡು ಗಂಟೆಗಳಲ್ಲಿ ಹೊರತೆಗೆಯಲಾಗುವುದು ಎಂದು ನೀಮ್ ಕಾ ಠಾಣಾ ಅಧಿಕಾರಿ ಶರದ್ ಮೆಹ್ರಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜುಂಜುನುವಿನ ಖೇತ್ರಿಯಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಲಿಫ್ಟ್ ಹಗ್ಗ ತುಂಡಾಗಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಮತ್ತು ಅಗತ್ಯವಿರುವ ಎಲ್ಲ ನೆರವನ್ನೂ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಂತ್ರಸ್ತರಿಗೆ ಸಹಾಯ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡಲಾಗುತ್ತದೆ” ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...