ರಾಜಸ್ಥಾನ | ‘ಖೀರ್’ ಮಾಡಲು ಹಾಲಿನ ವಾಹನವನ್ನೇ ಲೂಟಿಗೈದ ವೈದ್ಯರು! ವಿಡಿಯೋ ವೈರಲ್

Date:

ಐದಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ತಂಡವು ಹಾಲಿನ ವಾಹನವನ್ನೇ ಲೂಟಿಗೈದ ಘಟನೆ ರಾಜಸ್ಥಾನದ ಜೋಧ್‌ಪುರ ನಗರದ ಮಥುರಾದಾಸ್ ಮಾಥುರ್ ಆಸ್ಪತ್ರೆ ಬಳಿ ಭಾನುವಾರ ನಡೆದಿದೆ. ಈ ವೈದ್ಯರು ಖೀರ್ ಮಾಡಲೆಂದು ಹಾಲಿನ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಸ್ಥಳೀಯ ವರದಿಗಳ ಪ್ರಕಾರ, 5ಕ್ಕೂ ಹೆಚ್ಚು ಎಂಬಿಬಿಎಸ್ ವಿದ್ಯಾರ್ಥಿಗಳ ಗುಂಪು ಭಾನುವಾರ ಮುಂಜಾನೆ 4 ಗಂಟೆಗೆ ಸರಸ್ ಮಿಲ್ಕ್ ವ್ಯಾನ್ ಮಾಲೀಕ ಸುಖದೇವ್ ವಿಷ್ಣೋಯ್ ಅವರು ಚಲಾಯಿಸುತ್ತಿದ್ದ ಹಾಲಿನ ವಾಹನವನ್ನು ತಡೆದು ನಿಲ್ಲಿಸಿದೆ. ಬಳಿಕ ಸುಖದೇವ್ ಜೊತೆ ಅನುಚಿತವಾಗಿ ವರ್ತಿಸಿ ಹಾಲು ಇದ್ದ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಈ ಬಗ್ಗೆ ಪೊಲೀಸ್ ಅಧಿಕಾರಿ ದೇವೇಂದ್ರ ಸಿಂಗ್ ದೇವ್ಡಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದಿನವೊಂದಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದನೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬಂಧಿತರನ್ನು ಡಾ ಎಸ್‌ಎನ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ ಧೋರಿಮಣ್ಣ ಗ್ರಾಮದ 22 ವರ್ಷದ ವಿಕಾಸ್ ವಿಷ್ಣೋಯ್, ಸೇಡ್ವಾದ ಓಗಾಲಾ ನಿವಾಸಿ 23 ವರ್ಷದ ಓಂಪ್ರಕಾಶ್ ಜಾಟ್, ಗುಡಾ ಮಲಾನಿಯ ದಬರ್ ಗ್ರಾಮದ ನಿವಾಸಿ 22 ವರ್ಷದ ಮಹೇಶ್ ವಿಷ್ಣೋಯ್ ಎಂದು ಗುರುತಿಸಲಾಗಿದೆ. ಮೂವರು ಕೂಡಾ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ.

ಈ ಬಗ್ಗೆ ಸುಖದೇವ್ ವಿಷ್ಣೋಯ್ ವಾಹನದಲ್ಲಿದ್ದ 24 ಲೀಟರ್ ಹಾಲಿನ ಎರಡು ಕ್ರೇಟ್‌ಗಳ ಮತ್ತು ಹಣವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಈ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಕಾರ್ಯಾಚರಣೆಗಿಳಿದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾಗಿಯಾಗಿರುವ ಇತರ 2 ಮಂದಿಗಾಗಿ ಶೋಧ ನಡೆಯುತ್ತಿದೆ. ಹೆಚ್ಚಿನ ತನಿಖೆಯ ನಂತರ ಹಾಲಿನ ವಾಹನವನ್ನು ಪಾಲ್ ರಸ್ತೆಯಲ್ಲಿ ಬಿಟ್ಟುಹೋಗಿರುವುದು ಕಂಡುಬಂದಿದೆ. ಆರೋಪಿಗಳ ಮೇಲೆ ದರೋಡೆ ಮತ್ತು ಶಾಂತಿ ಕದಡುವ ಪ್ರಕರಣಗಳು ದಾಖಲಾಗಿವೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...