ರಾಜಸ್ಥಾನ: ಬಹುತೇಕ ಶಾಂತಿಯುತ ಚುನಾವಣೆ; ಶೇ.71.64ರಷ್ಟು ಮತದಾನ

Date:

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.

ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.

ರಾಜ್ಯದ ಒಟ್ಟು 200 ಸ್ಥಾನಗಳ ಪೈಕಿ 199 ಸ್ಥಾನಗಳಲ್ಲಿ 1,862 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅವರ ಆಯ್ಕೆಗಾಗಿ ಮತದಾನ ನಡೆದಿದೆ. ಏಳು ಜನ ಪಕ್ಷೇತರರು ಮತ್ತು ಬಿಜೆಪಿಯಿಂದ ಬಂದ ಒಬ್ಬರು ಸೇರಿದಂತೆ 97 ಹಾಲಿ ಶಾಸಕರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಆದರೆ ಪ್ರತಿಪಕ್ಷ ಬಿಜೆಪಿ ಆರು ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯ ಹಾಗೂ 59 ಶಾಸಕರಿಗೆ ಟಿಕೆಟ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ, ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ, ಶಾಂತಿ ಧರಿವಾಲ್, ಬಿಡಿ ಕಲ್ಲ, ಭನ್ವರ್ ಸಿಂಗ್ ಭಾಟಿ, ಸಲೇಹ್ ಮೊಹಮ್ಮದ್, ಮಮತಾ ಭೂಪೇಶ್, ಪ್ರತಾಪ್ ಸಿಂಗ್ ಖಚರಿಯಾವಾಸ್, ರಾಜೇಂದ್ರ ಸೇರಿದಂತೆ ಹಲವು ಸಚಿವರು ಕಣದಲ್ಲಿದ್ದಾರೆ.

ಬಿಜೆಪಿಯಲ್ಲಿ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ವಿರೋಧ ಪಕ್ಷದ ಉಪನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಸಂಸದರಾದ ದಿಯಾ ಕುಮಾರಿ, ರಾಜ್ಯವರ್ಧನ್ ರಾಥೋಡ್, ಬಾಬಾ ಬಾಲಕನಾಥ್ ಮತ್ತು ಕಿರೋಡಿ ಲಾಲ್ ಮೀನಾ ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ: ಪ್ರಶ್ನೆಗಾಗಿ ಲಂಚ ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್, ಬಿಜೆಪಿ ಅಲ್ಲದೇ ಆಮ್ ಆದ್ಮಿ ಪಾರ್ಟಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಭಾರತೀಯ ಟ್ರೈಬಲ್ ಪಾರ್ಟಿ, ಭಾರತ್ ಆದಿವಾಸಿ ಪಾರ್ಟಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷಗಳು ಕೂಡ ಚುನಾವಣಾ ಕಣದಲ್ಲಿವೆ.

ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...