ಟ್ವಿಟರ್‌ನಲ್ಲಿ ಮೋದಿ ಗೋ ಬ್ಯಾಕ್ ಟ್ರೆಂಡಿಂಗ್!‌

Date:

  • ಮೋದಿ ಗೋ ಬ್ಯಾಕ್ ಮೂಲಕ ರಾಜಸ್ಥಾನ ಭೇಟಿಗೆ ವಿರೋಧ
  • 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿಗಳನ್ನು ಆಯೋಜಿಸಿದೆ. ಈ ಪೈಕಿ ಮೊದಲ ರ‍್ಯಾಲಿ ರಾಜಸ್ಥಾನದಲ್ಲಿ ನಡೆಯಲಿದ್ದು, ಮೋದಿ ಆಗಮನ ವಿರೋಧಿಸಿ ಮೋದಿ ಗೋ ಬ್ಯಾಕ್ ಎಂಬ ವಿರೋಧ ವ್ಯಕ್ತವಾಗಿದೆ.

ಮೋದಿ ನೇತೃತ್ವದಲ್ಲಿ ಬಿಜೆಪಿ ‌ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೇರಿ ಮಂಗಳವಾರ 9 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ರ‍್ಯಾಲಿಗಳನ್ನು ಆಯೋಜಿಸಿದೆ. ರಾಜಸ್ಥಾನದ ಆಜ್ಮೀರ್‌ನಲ್ಲಿ ಬುಧವಾರ ಬೃಹತ್‌ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಆದರೆ ಮೋದಿ ರಾಜಸ್ಥಾನ ಭೇಟಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಬುಧವಾರ ಬೆಳಗ್ಗಿನಿಂದಲೇ ಟ್ವಿಟರ್‌ನಲ್ಲಿ ಮೋದಿ ಗೋ ಬ್ಯಾಕ್‌ ಮತ್ತು ಮೋದಿ ವಾಪಾಸ್‌ ಭಾಗೊ ಟ್ರೆಂಡಿಂಗ್ ಆಗಿದೆ. ಮಧ್ಯಾಹ್ನದ ವೇಳೆಗೆ ಸುಮಾರು ಒಂದು ಲಕ್ಷದ ಹದಿನೈದು ಸಾವಿರಕ್ಕೂ ಅಧಿಕ ಮಂದಿ ʻಮೋದಿ ಗೋ ಬ್ಯಾಕ್‌ʼ ಹ್ಯಾಷ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೊ
ಮೊಸ

ಒಲಿಂಪಿಕ್ಸ್‌ ಸೇರಿದಂತೆ ಅಂತಾರಾಷ್ಟ್ರೀಯ ಕೂಟಗಳಲ್ಲಿ ಪ್ರಶಸ್ತಿ ಗೆದ್ದು ದೇಶದ ಕೀರ್ತಿ ಬೆಳಗಿಸಿದ ಕುಸ್ತಿಪಟುಗಳು ರಾಜಧಾನಿಯ ಬೀದಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಅಹವಾಲನ್ನು ಆಲಿಸಲು ಸಮಯವಿಲ್ಲದ ಪ್ರಧಾನಿ, ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುವುದಕ್ಕೆ ಜನಸಾಮಾನ್ಯರ ಜತೆ ಪ್ರಮುಖವಾಗಿ ಜಾಟ್‌ ಸಮುದಾಯದವರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ಇವರಿಗೆ ಸಾಥ್‌ ನೀಡಿದ್ದಾರೆ.

“ಅತಿಥಿಗಳನ್ನು ದೇವರಂತೆ ಕಾಣುವುದು ಮತ್ತು ನಮ್ಮ ಭೂಮಿಗೆ ಅವರನ್ನು ಸ್ವಾಗತಿಸುವುದು ರಾಜಸ್ಥಾನದ ಸಂಪ್ರದಾಯ. ಮೋದಿ ಜೀ, ನೀವು ಪ್ರಧಾನಿ ಸ್ಥಾನದ ಘನತೆ ಎತ್ತಿ ಹಿಡಿದಿದ್ದರೆ, ನಾವು ನಿಮ್ಮನ್ನು ಅದೇ ರೀತಿಯಲ್ಲಿ ಗೌರವಿಸುತ್ತಿದ್ದೆವು. ಆದರೆ ನೀವು ಸ್ಥಾನ ಮತ್ತು ದೇಶ ಎರಡಕ್ಕೂ ಕಳಂಕ ತಂದಿದ್ದೀರಿ. ಈ ದೇಶದ ಹೆಮ್ಮೆಯ ಹೆಣ್ಣುಮಕ್ಕಳು ಬೀದಿಯಲ್ಲಿ ಅಳುತ್ತಿದ್ದಾರೆ. ಆದರೆ ನೀವು ಅವರ ಕುರಿತು ಅಸಡ್ಡೆ ಹೊಂದಿದ್ದೀರಿ” ಎಂದು ಜಾಟ್‌ ಯುನಿಟಿ ಎಂಬ ಟ್ವಿಟರ್‌ ಬಳೆಕದಾರರು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

ಸಿಯಾ ಚೌಧರಿ ಎಂಬುವವರು, ʻಮೋದಿ ನೋ ಎಂಟ್ರಿʼ ಎಂಬ ಹೋರ್ಡಿಂಗ್‌ ಚಿತ್ರವನ್ನು ಹಂಚಿಕೊಂಡಿದ್ದು, ಇದು ರಾಜಸ್ಥಾನ, ನೀವು ಗುಜರಾತ್‌ ಎಂದು ಅಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...