ಪಿಎಸ್‌ಐ ಪರೀಕ್ಷೆಯಲ್ಲಿ ಫೇಲ್; ಎರಡು ವರ್ಷ ಸಬ್‌ ಇನ್‌​ಸ್ಪೆಕ್ಟರ್ ಆಗಿ ನಟಿಸಿದ್ದ ರಾಜಸ್ಥಾನದ ಮೂಲಿ ದೇವಿ ಬಂಧನ

Date:

ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ(ಆರ್‌ಪಿಎ) ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಆಗಿ ನಟಿಸಿದ ರಾಜಸ್ಥಾನದ ‘ಮೂಲಿ ದೇವಿ’ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮೋನಾ ಬುಗಾಲಿಯಾ ಅಲಿಯಾಸ್ ಮೂಲಿ ದೇವಿ ವಿರುದ್ಧ ಜೈಪುರದಲ್ಲಿ ದೂರು ದಾಖಲಾಗಿದ್ದು, 2003ರಿಂದ ಆಕೆ ತಲೆಮರೆಸಿಕೊಂಡಿದ್ದಳು.

ನಕಲಿ ದಾಖಲೆಗಳ ಮೂಲಕ ‘ಮೂಲಿ ದೇವಿ’ ಎಂದು ಹೇಳಿಕೊಂಡು ಪೊಲೀಸ್ ಅಕಾಡೆಮಿಗೆ ಪ್ರವೇಶಿಸಿದ ಈ ಮಹಿಳೆ ತರಬೇತಿಗಳಿಗೆ ಹಾಜರಾಗಿದ್ದಾಳೆ. ಅಲ್ಲದೆ ಸುಮಾರು ಎರಡು ವರ್ಷಗಳ ಕಾಲ ನಿಜವಾದ ಅಧಿಕಾರಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಂಡಿದ್ದಾಳೆ. ಆಕೆಯ ಬಾಡಿಗೆ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದು, 7 ಲಕ್ಷ ರೂಪಾಯಿ ನಗದು, ಮೂರು ವಿಭಿನ್ನ ಪೊಲೀಸ್ ಸಮವಸ್ತ್ರಗಳು ಮತ್ತು ಪರೀಕ್ಷಾ ದಾಖಲೆಗಳು ಕಂಡುಬಂದಿದೆ. ಮಹಿಳೆ ನೀಡಿದ ನಕಲಿ ಗುರುತು ದಾಖಲೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದ ನಾಗೌರಂದ್‌ನ ನಿಂಬಾ ಕೆ ಬಾಸ್ ಗ್ರಾಮದವಳಾದ ಮೂಲಿಯ ತಂದೆ ಟ್ರಕ್ ಚಾಲಕರು. ಅಧಿಕೃತ ದಾಖಲೆಗಳ ಪ್ರಕಾರ, 2021ರಲ್ಲಿ ರಾಜಸ್ಥಾನ ಸಬ್‌ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಮೂಲಿ ಅನುತ್ತೀರ್ಣರಾಗಿದ್ದು, ಬಳಿಕ ‘ಮೂಲಿ ದೇವಿ’ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾಳೆ. ಹಾಗೆಯೇ ಸಾಮಾಜಿಕ ಮಾಧ್ಯಮದಲ್ಲಿ ತಾನು ಸಬ್‌ ಇನ್‌ಸ್ಪೆಕ್ಟರ್ ಆಗಿ ಆಯ್ಕೆಯಾಗಿದ್ದೇನೆ ಎಂದು ಸುಳ್ಳು ಮಾಹಿತಿ ಹರಡಿದ್ದಾಳೆ.

ನೇಮಕಾತಿಗೊಂಡ ಸಬ್‌ ಇನ್‌ಸ್ಪೆಕ್ಟರ್‌ಗಳ ವಾಟ್ಸಾಪ್‌ ಗುಂಪಿನಲ್ಲೂ ಬುಗಾಲಿಯಾ ಇದ್ದು ಕ್ರೀಡಾ ಕೋಟಾದ ಮೂಲಕ ದಾಖಲಾದ ರಾಜಸ್ಥಾನ ಪೊಲೀಸ್ ಅಕಾಡೆಮಿಯ ಈ ಹಿಂದಿನ ಬ್ಯಾಚ್‌ನ ಅಭ್ಯರ್ಥಿ ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಳು ಎಂದು ಹೇಳಲಾಗಿದೆ.

ಬುಗಾಲಿಯಾ ಆರ್‌ಪಿಎ ಪೆರೇಡ್ ಮೈದಾನದಲ್ಲಿ ಹೆಚ್ಚಾಗಿ ಪೂರ್ಣ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೂಲಿ ಔಟ್‌ಡೋರ್‌ ಡ್ರಿಲ್‌ಗಳಲ್ಲೂ ಭಾಗಿಯಾಗುತ್ತಿದ್ದಳು. ಹಲವು ಅಧಿಕಾರಿಗಳೊಂದಿಗೆ ಫೋಟೋ ತೆಗೆಸಿಕೊಂಡಿದ್ದು ಯುವ ಆಕಾಂಕ್ಷಿಗಳಿಗೆ ಸಲಹೆ ನೀಡುವ ಕಾರ್ಯಗಳನ್ನು ಮಾಡಿದ್ದಳು. ತರಬೇತಿ ಪಡೆಯುತ್ತಿದ್ದ ಸಬ್‌ ಇನ್‌ಸ್ಪೆಕ್ಟರ್‌ಗಳು ಅನುಮಾನ ವ್ಯಕ್ತಪಡಿಸಿದ ಬಳಿಕ ವಂಚನೆ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಎಲ್ಲ ಆಪಾದನೆಯನ್ನು ಬುಗಾಲಿಯಾ ಒಪ್ಪಿಕೊಂಡಿದ್ದಾಳೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...