ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಗುಜರಾತ್ ಸರ್ಕಾರ ಸೋಮವಾರ ಆದೇಶಿಸಿದೆ.
“ಅಗತ್ಯವಾದ ಅನುಮೋದನೆಗಳಿಲ್ಲದೆ ಆ ಗೇಮ್ ಝೋನ್ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಸಂಪೂರ್ಣ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಹೊಣೆಗಾರರು ಎಂದು ಪರಿಗಣಿಸಲಾಗುತ್ತದೆ” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
CCTV footage of the fire tragedy in the game zone in Rajkot. The fire first erupted in the ground floor and then spread across the sprawling area spread in almost 2000 square metre plot. #Rajkot #CCTVfootage #Gujarat #TRPgamezone #rajkot #fire pic.twitter.com/kMsgOBIZAP
— Vishvajit Singh Chauhan (@vishvajitsingh_) May 26, 2024
“ಗೇಮ್ ಝೋನ್ ರಸ್ತೆ ಮತ್ತು ಕಟ್ಟಡಕ್ಕೆ ಸಂಬಂಧಿಸಿ ಆಯಾ ಇಲಾಖೆಗಳಿಂದ ಅನುಮತಿಯನ್ನು ಪಡೆದುಕೊಂಡಿದೆ. ಅಗ್ನಿಶಾಮಕ ಎನ್‌ಒಸಿ ಪಡೆಯಲು ಅಗ್ನಿಶಾಮಕ ಸುರಕ್ಷತಾ ಸಲಕರಣೆಗಳ ಪುರಾವೆಯನ್ನು ಸಹ ಸಲ್ಲಿಸಿದೆ. ಆದರೆ ಈ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ” ಎಂದು ಭಾನುವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜ್‌ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಬೆಂಕಿ ಅವಘಡ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು. ಹಾಗೆಯೇ ಈ ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಮತ್ತು ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಇದಾದ ಬೆನ್ನಲ್ಲೇ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನ ನಗರ ಯೋಜನಾ ವಿಭಾಗದ ಸಹಾಯಕ ಎಂಜಿನಿಯರ್ ಜೈದೀಪ್ ಚೌಧರಿ, ಆರ್‌ಎಂಸಿ ಸಹಾಯಕ ನಗರ ಯೋಜಕ ಗೌತಮ್ ಜೋಷಿ, ರಾಜ್‌ಕೋಟ್ ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಉಪ ಕಾರ್ಯನಿರ್ವಾಹಕ ಎಂಜಿನಿಯರ್ ಎಂಆರ್ ಸುಮಾ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ವಿಆರ್ ಪಟೇಲ್ ಮತ್ತು ಎನ್‌ಐ ರಾಥೋಡ್‌ರನ್ನು ಅಮಾನತುಗೊಳಿಸಲಾಗಿದೆ. ಆಯಾ ಇಲಾಖೆಗಳು ಈ ಅಮಾನತು ಆದೇಶವನ್ನು ಹೊರಡಿಸಿದೆ.
The incident of the death of more than 20 people including small children due to a massive fire in TRP Game Zone in Rajkot, Gujarat is very unfortunate and sad. Strict action should be taken against the careless people responsible for this incident.
Prayers and condolences… pic.twitter.com/m1IGPxjCXk— Gulshan Katiyar (@GulshanKatiyar) May 25, 2024
ರಾಜ್‌ಕೋಟ್‌ನ ನಾನಾ-ಮಾವಾ ಪ್ರದೇಶದ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು ಮಕ್ಕಳು, ನವವಿವಾಹಿತ ದಂಪತಿಗಳು ಸೇರಿದಂತೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಗೇಮ್ ಝೋನ್‌ನ ಆರು ಪಾಲುದಾರರು ಮತ್ತು ಇನ್ನೊಬ್ಬ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಗುಜರಾತ್ ಹೈಕೋರ್ಟ್ ಭಾನುವಾರ ಅಗ್ನಿ ದುರಂತವನ್ನು ಸ್ವಯಂಪ್ರೇರಿತವಾಗಿ ಉಲ್ಲೇಖಿಸಿದೆ. ಇದು ಪ್ರಾಥಮಿಕವಾಗಿ “ಮಾನವ ನಿರ್ಮಿತ ದುರಂತ” ಎಂದು ಬಣ್ಣಿಸಿದೆ.
#WATCH | Gujarat: Forensic Science Laboratory (FSL) team conducts an investigation at TRP Game Zone in Rajkot, where a massive fire broke out on 25th May claiming the lives of 27 people. pic.twitter.com/PyT17kC3VO
— ANI (@ANI) May 27, 2024
ಈ ಅಗ್ನಿ ಅವಘಡದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದ್ದು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.





