ರಾಜ್ಯಸಭಾ ಚುನಾವಣೆ | ಆಪರೇಷನ್ ಕಮಲ ಭೀತಿ; ಒಡಿಶಾ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್

Date:

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಈ ಪೈಕಿ, ನಾಲ್ಕನೇ ಸ್ಥಾನಕ್ಕೆ ಯಾವುದೇ ಪಕ್ಷದ ಬಳಿ ಸ್ಪಷ್ಟ ಸಂಖ್ಯಾಬಲವಿಲ್ಲದ ಕಾರಣ, ಒಡಿಶಾ ರಾಜಕೀಯದಲ್ಲಿ ಅಡ್ಡಮತದಾನದ ಭೀತಿ ಎದುರಾಗಿದೆ. ಆಡಳಿತಾರೂಢ ಬಿಜೆಪಿ ‘ಆಪರೇಷನ್ ಕಮಲ’ದ ಮೂಲಕ ಅಡ್ಡಮತದಾನಕ್ಕೆ ಯತ್ನಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ 14 ಶಾಸಕರಲ್ಲಿ 9 ಮಂದಿಯನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್‌ಗೆ ಸ್ಥಳಾಂತರಿಸಿದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಈ ಶಾಸಕರನ್ನು ಸ್ಥಳಾಂತರಿಸಲಾಗಿದೆ.

ನಾಲ್ಕನೇ ಸ್ಥಾನಕ್ಕಾಗಿ ಬಿಜೆಡಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಖ್ಯಾತ ಮೂತ್ರಪಿಂಡ ತಜ್ಞ ದತ್ತೇಶ್ವರ ಹೋತಾ ಅವರನ್ನು ಕಣಕ್ಕಿಳಿಸಿವೆ. ಪ್ರಖ್ಯಾತ ಹೋಟೆಲ್ ಉದ್ಯಮಿ ಮತ್ತು ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರು ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ, ಬಿಜೆಪಿಗರು ಬಿಜೆಡಿ ಮತ್ತು ಕಾಂಗ್ರೆಸ್‌ ಶಾಸಕರನ್ನು ಅಡ್ಡಮತದಾನಕ್ಕೆ ಪ್ರಚೋದಿಸಬಹುದು ಎಂಬ ಆತಂಕ ಎರಡೂ ಪಕ್ಷಗಳಲ್ಲಿದೆ.

ಆದ್ದರಿಂದಲೇ, ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ಅವರು ತಮ್ಮ ಒಂಬತ್ತು ಶಾಸಕರನ್ನು ಬೆಂಗಳೂರಿಗೆ ಕರೆತಂದಿದ್ದಾರೆ. ಎದುರಾಳಿ ಪಕ್ಷಗಳು ತಮ್ಮ ಶಾಸಕರನ್ನು ಸೆಳೆಯದಂತೆ ತಡೆಯುವುದು ಕಾಂಗ್ರೆಸ್‌ನ ತಂತ್ರ ಮತ್ತು ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಶಾಸಕರ ಜೊತೆಗಿನ ಸಭೆ ಮತ್ತು ಉನ್ನತ ಮಟ್ಟದ ಸಭೆಗಳಲ್ಲಿ ಚರ್ಚೆಯಾದ ಬಳಿಕ, ಪಕ್ಷದ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಶಾಸಕರನ್ನು ಬೆಂಗಳೂರಿಗೆ ಕಳಿಸಲಾಗಿದೆ. ಉಳಿದ ಶಾಸಕರನ್ನು ಹೈದರಾಬಾದ್ ಅಥವಾ ನವದೆಹಲಿಗೆ ಕರೆದೊಯ್ಯುವ ಸಾಧ್ಯತೆಯಿದೆ” ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ರಾಮಚಂದ್ರ ಕದಮ್ ಅವರು ರಾಜ್ಯಸಭಾ ಚುನಾವಣೆಗೂ ಮುನ್ನ ಆಡಳಿತಾರೂಢ ಬಿಜೆಪಿ ‘ಕುದುರೆ ವ್ಯಾಪಾರ’ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. “ತಮ್ಮ ಶಾಸಕರು ಯಾವುದೇ ಕಾರಣಕ್ಕೂ ಅಡ್ಡಮತದಾನ ಮಾಡುವುದಿಲ್ಲ,” ಎಂದು ಕದಮ್ ಹೇಳಿದ್ದಾರೆ.

ಒಡಿಶಾದ ಕಾಂಗ್ರೆಸ್‌ ಶಾಸಕರಾದ ಮಂಗು ಖಿಲ್ಲಾ, ಪವಿತ್ರ ಸೌಂತಾ, ಕದ್ರಕಾ ಅಪ್ಪಲ ಸ್ವಾಮಿ, ರಾಜನ್ ಎಕ್ಕಾ ಮತ್ತು ಪ್ರಫುಲ್ಲ ಪ್ರಧಾನ್ ಬೆಂಗಳೂರಿಗೆ ಬಂದಿದ್ದಾರೆ. ಅವರೆಲ್ಲರನ್ನೂ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್‌ಗೆ ಕಳುಹಿಸಲಾಗಿದೆ. ಸೋಮವಾರ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಎಲ್ಲ ಶಾಸಕರು ಒಡಿಶಾಗೆ ಮರಳಲಿದ್ದಾರೆ.

ಇತ್ತ, ಬಿಜೆಡಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೂಡ ತಮ್ಮ ಶಾಸಕರನ್ನು ಒಗ್ಗಟ್ಟಾಗಿ ಇರಿಸಲು ತಂತ್ರ ರೂಪಿಸಿದ್ದಾರೆ. ಶುಕ್ರವಾರದಿಂದ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ತಮ್ಮ ನಿವಾಸದಲ್ಲಿ ನಡೆಯಲಿರುವ ಎರಡು ಗಂಟೆಗಳ ಸಭೆಗೆ ಹಾಜರಾಗುವಂತೆ ಬಿಜೆಡಿ ಶಾಸಕರಿಗೆ ಪಟ್ನಾಯಕ್ ಪತ್ರ ಬರೆದಿದ್ದಾರೆ.

ಪಟ್ನಾಯಕ್ ಅವರ ಪತ್ರದ ಪ್ರಕಾರ, ರಾಜ್ಯಸಭಾ ಚುನಾವಣಾ ವಿಧಾನ ಮತ್ತು ಮತದಾನದ ಪ್ರಕ್ರಿಯೆಯ ಬಗ್ಗೆ ಶಾಸಕರಿಗೆ ತರಬೇತಿ ನೀಡಲಾಗುತ್ತದೆ. “ಒಡಿಶಾದಲ್ಲಿ 12 ವರ್ಷಗಳ ನಂತರ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ನಡೆಯುತ್ತಿದೆ. ಕಳೆದ ಬಾರಿ 2014ರ ಫೆಬ್ರವರಿಯಲ್ಲಿ ಚುನಾವಣೆ ನಡೆದಿತ್ತು. ಆ ಬಳಿಕ, ರಾಜಸಭಾ ಚುನಾವಣೆ ನಡೆಯದ ಕಾರಣ, ಅನೇಕ ಶಾಸಕರಿಗೆ ಮತದಾನದ ಪ್ರಕ್ರಿಯೆ ತಿಳಿದಿಲ್ಲ. ಆದ್ದರಿಂದ ಮತಗಳು ತಿರಸ್ಕೃತವಾಗದಂತೆ ಅವರಿಗೆ ತರಬೇತಿ ನೀಡುವುದು ಮುಖ್ಯವಾಗಿದೆ” ಎಂದು ಬಿಜೆಡಿ ನಾಯಕರೊಬ್ಬರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಇಸ್ರೇಲ್ ದೋಸ್ತಿ; ಎಫೆಕ್ಟ್‌ ಮಾತ್ರ ಭಾರತಕ್ಕೆ!

ಒಡಿಶಾ ವಿಧಾನಸಭೆಯ ಸಂಖ್ಯಾಬಲದ ಪ್ರಕಾರ, ಉಳಿದ ಮೂರು ರಾಜ್ಯಸಭಾ ಸ್ಥಾನಗಳ ಪೈಕಿ ಎರಡನ್ನು ಬಿಜೆಪಿ ಗೆಲ್ಲಲಿದೆ. ಬಿಜೆಡಿ ಒಂದು ಸ್ಥಾನವನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಬಿಜೆಡಿ ಮತ್ತು ಕಾಂಗ್ರೆಸ್‌ ಮೈತ್ರಿಯು ನಾಲ್ಕನೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗುತ್ತದೆ.

147 ಸದಸ್ಯರ ಒಡಿಶಾ ವಿಧಾನಸಭೆಯಲ್ಲಿ, ಆಡಳಿತಾರೂಢ ಬಿಜೆಪಿ 79 ಶಾಸಕರನ್ನು ಹೊಂದಿದ್ದು, ಮೂವರು ಪಕ್ಷೇತರ ಶಾಸಕರ ಬೆಂಬಲವನ್ನೂ ಹೊಂದಿದೆ. ಇತ್ತೀಚೆಗೆ, ಪಕ್ಷವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಇಬ್ಬರು ಶಾಸಕರನ್ನು ಅಮಾನತುಗೊಳಿಸಿದ ನಂತರ ಬಿಜೆಡಿ ಬಲ 48ಕ್ಕೆ ಇಳಿದಿದೆ. ಕಾಂಗ್ರೆಸ್ 14 ಮತ್ತು ಸಿಪಿಐ(ಎಂ) ಒಬ್ಬ ಶಾಸಕರನ್ನು ಹೊಂದಿದೆ. ಚುನಾವಣಾ ಆಯೋಗದ ಸೂತ್ರದ ಪ್ರಕಾರ, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ಅಭ್ಯರ್ಥಿಗೆ ಕನಿಷ್ಠ 30 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...