ಇಸ್ರೇಲ್ | ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ಮೇಘಾಲಯದ ಸಂಸದ

Date:

ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ರಾಜ್ಯಸಭಾ ಸದಸ್ಯ ಡಾ ಖಾರ್ಲುಖಿ ಅವರು ತಮ್ಮ ರಾಜ್ಯದ 24 ಸ್ಥಳೀಯರೊಂದಿಗೆ ಜೆರುಸಲೇಂಗೆ ತೆರಳಿದ್ದರು. ಯುದ್ಧದ ವಾತಾವರಣ ನಿರ್ಮಾಣವಾದ ಕಾರಣ ಅವರು ಬೆತ್ಲೆಹೆಮ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ಮೇಘಾಲಯ ಮುಖ್ಯಮಂತ್ರಿ ಮತ್ತು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ, ಡಾ ಖಾರ್ಲುಖಿ ಅವರು ಭಾರತಕ್ಕೆ ವಾಪಸ್‌ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ (ಎಂಇಎ) ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

ಮೂಲಗಳ ಪ್ರಕಾರ, ಖಾರ್ಲುಖಿ ಅವರನ್ನು ಭಾನುವಾರ ಈಜಿಪ್ಟ್‌ಗೆ ಭಾರತೀಯ ರಾಯಭಾರ ಕಚೇರಿಯು ಸ್ಥಳಾಂತರಿಸುವ ಸಾಧ್ಯತೆಯಿದೆ.

ಹಮಾಸ್ ಮತ್ತು ಇಸ್ರೇಲ್ ನಡುವಿನ ಪೂರ್ಣ ಪ್ರಮಾಣದ ಯುದ್ಧದಿಂದ ಇಲ್ಲಿಯವರೆಗೆ 500 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳು ಭಾರತೀಯ ನಾಗರಿಕರಿಗೆ ಎಚ್ಚರಿಕೆಯನ್ನು ನೀಡುವಂತೆ ಮತ್ತು ಅಗತ್ಯವಿದ್ದರೆ ಕಚೇರಿಯನ್ನು ಸಂಪರ್ಕಿಸುವಂತೆ ಎಚ್ಚರಿಸಿದೆ.

ಏತನ್ಮಧ್ಯೆ, ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚ ಅವರು ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...