ಅಯೋಧ್ಯೆ ರಾಮಮಂದಿರ: ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ನಿಧನ

Date:

ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ಶನಿವಾರ ನಿಧನರಾಗಿದ್ದಾರೆ.

ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್‌ ಅವರು, ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ, ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಕೂಡ ಆಗಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

ದೀಕ್ಷಿತ್‌ ಅವರ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿವರೇ ಈ ವೇಳೆ ಮುಖ್ಯ ಪಾತ್ರ ವಹಿಸಿದ್ದರು. ರಾಮಮಂದಿರದಲ್ಲಿ ಎಲ್ಲ ಪೂಜೆಗಳು ನೆರವೇರಿದ್ದವು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ 14

“ಆಚಾರ್ಯ ಶ್ರೀ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನ ಅಧ್ಯಾತ್ಮ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗೆ ಅವರು ಮಾಡಿದ ಸೇವೆಗಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ” ಎಂದು ಕಾಶಿಯ ವಿದ್ವಾಂಸ, ಶ್ರೀರಾಮ ಜನ್ಮಭೂಮಿ ಪ್ರಾಣಪ್ರತಿಷ್ಠೆಯ ಪ್ರಧಾನ ಅರ್ಚಕರೂ ಆದ ವೇದಮೂರ್ತಿ ಅವರು ಸ್ಮರಿಸಿದ್ದಾರೆ.

ಹಿರಿಯ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಇದೇ ವರ್ಷದ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮ ಪ್ರಾಣಪ್ರತಿಷ್ಠೆ ಸಮಾರಂಭ ಜರುಗಿತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನಡೆದಿತ್ತು. ಆದರೆ ಇದು 2024ರ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಗೆ ಯಾವುದೇ ಲಾಭ ನೀಡಿರಲಿಲ್ಲ. ಅಯೋಧ್ಯೆ ಇರುವ ಫೈಝಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಬಿಜೆಪಿಯ ಸೋಲಿನಿಂದ ಸಂಘಪರಿವಾರ, ಬಲಪಂಥೀಯರ ಸಹಿತ ಬಿಜೆಪಿಯ ಬೆಂಬಲಿಗರು ಆಘಾತಕ್ಕೊಳಗಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...