ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

Date:

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಚೆರುಕುರಿ ರಾಮೋಜಿ ರಾವ್ ಅವರು ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂಧಿಸನೆ, ಸಾವನ್ನಪ್ಪಿದ್ದಾರೆ.

ರಾಮೋಜಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದಲೂ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂನ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ರಾಮೋಜಿ ರಾವ್ ಅವರು ಈನಾಡು ಗ್ರೂಪ್ ಆಫ್ ಕಂಪನೀಸ್, ETV ನೆಟ್‌ವರ್ಕ್, ಮಾರ್ಗದರ್ಶಿ ಚಿಟ್ ಫಂಡ್ ಮತ್ತು ರಾಮೋಜಿ ಫಿಲ್ಮ್ ಸಿಟಿ (RFC)ಗೆ ಮುಖ್ಯಸ್ಥರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕೋದ್ಯಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆಗಳಿಗಾಗಿ 2016ರಲ್ಲಿ ಭಾರತದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು.

ರಾಮೋಜಿ ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, “ಇದು ಅತ್ಯಂತ ದುಃಖಕರ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ್ದವರು. ಅವರ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ರಾಮೋಜಿ ರಾವ್ ಅವರ ಅಗಲಿಕೆ ತುಂಬಲಾರದ ನಷ್ಟ ಎಂದಿದ್ದಾರೆ. “ರಾಜ್ಯ ಸರ್ಕಾರವು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...