ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

Date:

ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇಲೆ ಅತ್ಯಾಚಾರ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಂತರ್‌ ಧರ್ಮೀಯ ಲಿವ್‌-ಎನ್‌ ರಿಲೇಷನ್‌ಶಿಪ್‌ನಲ್ಲಿದ್ದ ಸ್ನೇಹಿತ ಅತುಲ್ ಗೌತಮ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನ್ನ ಜೊತೆಗಿನ ಪ್ರೇಮ ಸಂಬಂಧವನ್ನು ತೊರೆದಿದ್ದಾನೆ. ತಾನು ಗರ್ಭಿಣಿಯಾಗಿದ್ದು, ತಮಗೆ ನ್ಯಾಯ ದೊರಕಿಸಬೇಕೆಂದು ಕೋರಿ ಸಂತ್ರಸ್ತ ಮುಸ್ಲಿಂ ಯುವತಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ, “ವಿಶೇಷ ವಿವಾಹ ಕಾಯ್ದೆ (SMA) ಅಡಿಯಲ್ಲಿ ಸಂತ್ರಸ್ತೆಯನ್ನು ಆರೋಪಿ ವಿವಾಹವಾಗಬೇಕು. ಸಂತ್ರಸ್ತೆ ಮತ್ತು ಮಗುವಿಗೆ ಆರ್ಥಿಕ ಭದ್ರತೆ ನೀಡಬೇಕು” ಎಂದು ಷರತ್ತು ವಿಧಿಸಿದ್ದು, ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ದೂರುದಾರ ಸಂತ್ರಸ್ತೆ ಮತ್ತು ಆರೋಪಿ ಮತ್ತೆ ಜೊತೆಯಾಗಿ ಬದುಕುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಸಂತ್ರಸ್ತೆ ಮತ್ತು ಮಗುವಿನ ಭವಿಷ್ಯದ ದೃಷ್ಟಿಯಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಒಂದೆರಡು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿ ಇದ್ದರೆಂದು ಹೇಳಲಾಗಿದ್ದು, ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಲು ಅವರು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...