ಅತ್ಯಾಚಾರ ಆರೋಪಿಯನ್ನು ಬೆತ್ತಲೆಗೊಳಿಸಿ-ಮೆರವಣಿಗೆ ಮಾಡಿ ಹಲ್ಲೆ, ನಾಯಿ ಬಿಟ್ಟು ದಾಳಿ

Date:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ವಿಶೇಶ್ವರಗಂಜ್ ಪ್ರದೇಶದಲ್ಲಿ ಘಟನೆ ನಡೆಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಯುವಕನ ಸಂಬಂಧಿ ಮಹಿಳೆಯೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ ಗ್ರಾಮದ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ; 22 ವರ್ಷದ ಯುವಕನನ್ನು ಬೆತ್ತಲೆಗೊಳಿಸಿ ಎತ್ತಿನ ಬಂಡಿಗೆ ಕಟ್ಟಿ ಮೆರವಣಿಗೆ ಮಾಡಿರುವುದು, ಥಳಿಸಿರುವುದ ಕಂಡುಬಂದಿದೆ. ಅಲ್ಲದೆ, ಆತನ ಮೇಲೆ ದಾಳಿ ಮಾಡುವಂತೆ ನಾಯಿಯನ್ನು ಪ್ರೇರೇಪಿಸುವುದು ಕಂಡುಬಂದಿದೆ. ಜೊತೆಗೆ, ‘ನಾಯಿಯನ್ನು ಬಿಡಿ, ಆತನ ಮೇಲೆ ದಾಳಿ ಮಾಡಲಿ, ಆತ ಸತ್ತರೆ ಸಾಯಲಿ’ ಎಂದು ಹಿಂದಿಯಲ್ಲಿ ಹೇಳುತ್ತಿರುವ ಧ್ವನಿಯೂ ಕೇಳಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ಯುವಕ ಸಂಬಂಧಿ ಮಹಿಳೆಯೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏಪ್ರಿಲ್ 3ರಂದು ತನ್ನ ಭಾವನನ್ನು ಹಗ್ಗಗಳಿಂದ ಕಟ್ಟಿ ಹಲ್ಲೆ ನಡೆಸಲಾಗಿದೆ. ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: Encounter | ಬಲಾಢ್ಯರು- ಪ್ರಭಾವಿಗಳ ಒಂದೇ ಒಂದು ಎನ್‌ಕೌಂಟರ್ ಆಗಿದ್ದರೆ ತೋರಿಸಿ…

“ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ.

“ಆತನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೈದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸದ್ಯ, ತನಿಖೆ ನಡೆಯುತ್ತಿದೆ” ಎಂದು ಪಾಂಡೆ ಹೇಳಿದ್ದಾರೆ.

ಸಂತ್ರಸ್ತ ಯುವಕ ಕೂಡ ಅದೇ ಗ್ರಾಮದವನಾಗಿದ್ದಾನೆ. ಆತನ ವಿರುದ್ಧ ಮತ್ತೊಂದು ಸಮುದಾಯದ ಮಹಿಳೆಯು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆತನ ಈವರೆಗೆ ಪೊಲೀಸರಿಗೆ ಸಿಕ್ಕಿರಲಿಲ್ಲ. ಇದೀಗ, ಗ್ರಾಮಸ್ಥರು ಆತನ ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದಾರೆ. ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...