ಅತ್ಯಾಚಾರ ಪ್ರಕರಣ | ಪೆರೋಲ್ ಮೇಲೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್ ಬಿಡುಗಡೆ

Date:

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್ ಸಿಂಗ್‌ಗೆ 20 ದಿನಗಳ ‘ಪೆರೋಲ್’ ನೀಡಲಾಗಿದೆ. ಆತ, ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್ ಸಿಂಗ್ ವಿರುದ್ಧದ ಆರೋಪ ಸಾಬೀತಾಗಿದ್ದು, ಆತನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಆತನನ್ನು ಹರಿಯಾಣದ ರೋಹಕ್ಟ್‌ನ ಸುನಾರಿಯಾ ಜೈಲಿನಲ್ಲಿ ಇರಿಸಲಾಗಿದೆ. ಇದೀಗ, ಹರಿಯಾಣ ಸರ್ಕಾರ ಆತನಿಗೆ 20 ದಿನಗಳ ಪೆರೋಲ್ ನೀಡಿದ್ದು, ಬಿಗಿ ಭದ್ರತೆಯ ನಡುವೆ ಗುರ್ಮೀತ್ ಸಿಂಗ್ ಜೈಲಿನಿಂದ ಹೊರಬಂದಿದ್ದಾರೆ.

ಜೈಲಿನಿಂದ ಹೊರಗಿರುವ ಈ 20 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಚಟುವಟಿಕೆ, ಪ್ರಚಾರ, ಭಾಷಣ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಗುರ್ಮೀತ್ ಸಿಂಗ್, ತಮ್ಮ ಬಿಡುಗಡೆಯ ತಾತ್ಕಾಲಿಕ ಅವಧಿಯನ್ನು ಉತ್ತರ ಪ್ರದೇಶದ ಬಾಗ್‌ಪತ್‌ನ ಬರ್ನಾವದಲ್ಲಿರುವ ಡೇರಾ ಆಶ್ರಮದಲ್ಲಿ ಕಳೆಯಲಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಸಮಯದಲ್ಲಿ ಆತನಿಗೆ ಪೆರೋಲ್ ನೀಡಿರುವುದಕ್ಕೆ ಹರಿಯಾಣದ ಬಿಜೆಪಿ ಸರ್ಕಾರವನ್ನು ವಿಪಕ್ಷಗಳು ಟೀಕಿಸುತ್ತಿವೆ.

ಈ ಹಿಂದೆಯೂ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದ ವೇಳೆ, ಆಗಸ್ಟ್‌ನಲ್ಲಿ ಗುರ್ಮೀತ್‌ ಸಿಂಗ್‌ಗೆ 21 ದಿನಗಳ ‘ಪೆರೋಲ್’ ನೀಡಲಾಗಿತ್ತು. ಅಂದಹಾಗೆ, ದೀರ್ಘಾವಧಿ ಜೈಲು ಶಿಕ್ಷಗೆ ಗುರಿಯಾಗಿರುವವರಿಗೆ ತಾತ್ಕಾಲಿಕ ಬಿಡುಗಡೆಗೆ ಅವಕಾಶವಿರುತ್ತದೆ. ಅವರು ಪೆರೋಲ್ ಮೇಲೆ ಜೈಲಿನಿಂದ ಹೊರಬರಲು ಅವನು ಮಾಡಿಕೊಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...