ಅತ್ಯಾಚಾರ ಅಪರಾಧಿ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ 6 ತಿಂಗಳು ಜಾಮೀನು

Date:

ಅತ್ಯಾಚಾರ ಪ್ರಕರಣದ ಅಪರಾಧಿ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಅನಾರೋಗ್ಯ ಆಧಾರದ ಮೇಲೆ 6 ತಿಂಗಳು ಜಾಮೀನು ಮಂಜೂರು ಮಾಡಿ ಗುಜರಾತ್ ಹೈಕೋರ್ಟ್‌ ಆದೇಶಿಸಿದೆ.

2013ರ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಅಸಾರಾಂ ಬಾಪು, ತನ್ನ ಹೃದಯ ಸ್ಥಿತಿ ಹದಗೆಡುತ್ತಿದೆ. ವೈದ್ಯಕೀಯ ಚಿಕಿತ್ಸೆ ಪಡೆಯುವ ಅಗತ್ಯವಿದೆ. ಅದಕ್ಕಾಗಿ ಜಾಮೀನು ನೀಡಬೇಕೆಂದು ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಐ ಜೆ ವೋರಾ ಮತ್ತು ನ್ಯಾಯಮೂರ್ತಿ ಆರ್ ಟಿ ವಾಚಾನಿ ಅವರಿದ್ದ ವಿಭಾಗೀಯ ಪೀಠವು, “ಅಸಾರಾಂ ಬಾಪುಗೆ ವೈದ್ಯಕೀಯ ಚಿಕಿತ್ಸೆ ಪಡೆಯುವ ಸಾಂವಿಧಾನಿಕ ಹಕ್ಕಿದೆ. ಅವರ ಆರೋಗ್ಯ ಸಮಸ್ಯೆಗಳ ಕಾರಣಕ್ಕಾಗಿ ಅವರಿಗೆ ತಾತ್ಕಾಲಿಕ ಬಿಡುಗಡೆಯ ಅಗತ್ಯವಿದೆ. ಈಗಾಗಲೇ ರಾಜಸ್ಥಾನದ ಜೋಧಪುರ ಹೈಕೋರ್ಟ್ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಿರುವುದರಿಂದ, ಗುಜರಾತ್ ಹೈಕೋರ್ಟ್‌ ಬೇರೆ ನಿಲುವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2013ರ ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಅವರ ಮೇಲ್ಮನವಿಯ ವಿಚಾರಣೆಯು ಮುಂದಿನ ಆರು ತಿಂಗಳೊಳಗೆ ಮುಂದುವರಿಯದಿದ್ದರೆ, ಅವರು ಜಾಮೀನು ವಿಸ್ತರಣೆಗಾಗಿ ಮನವಿ ಸಲ್ಲಿಸಲು ಅರ್ಹರಾಗಿರುತ್ತಾರೆ” ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಆದರೆ, ಇದಕ್ಕೆ ವ್ಯತಿರಿಕ್ತವಾಗಿ, ರಾಜಸ್ಥಾನ ಸರ್ಕಾರವು ಜೋಧ್‌ಪುರ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಲು ನಿರ್ಧರಿಸಿದರೆ, ಗುಜರಾತ್ ಸರ್ಕಾರವು ಸಹ ಈ ಪರಿಹಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಇದೇ ವೇಳೆ, ಸರ್ಕಾರದ ಪರ ವಾದ ಮಂಡಿಸಿದ ವಕೀಲರು, “ಜೋಧ್‌ಪುರ ಜೈಲಿನಲ್ಲಿರುವ ವೈದ್ಯಕೀಯ ಸೌಲಭ್ಯಗಳು ಅಸಾರಾಂ ಬಾಪು ಅವರ ಆರೋಗ್ಯ ಸಮಸ್ಯೆಗೆ ನೆರವು ನೀಡಲು ಸಾಕಾಗುವುದಿಲ್ಲ ಎಂಬುದು ಸಾಬೀತಾದರೆ, ಅವರನ್ನು ಅಹಮದಾಬಾದ್‌ನ ಸಬರಮತಿ ಜೈಲಿಗೆ ಸ್ಥಳಾಂತರಿಸಬಹುದು. ಅಲ್ಲಿ ಸುಧಾರಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಬಹುದು” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

1997 ಮತ್ತು 2006ರ ನಡುವೆ ಅಹಮದಾಬಾದ್‌ನಲ್ಲಿರುವ ಮೋಟೆರಾ ಆಶ್ರಮದಲ್ಲಿ ಅಸಾರಾಂ ಬಾಪು ಅವರು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸೂರತ್‌ನ ಮಹಿಳೆಯೊಬ್ಬರು ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ 2013ರಲ್ಲಿ ಅಸಾರಾಂ ಬಾಪು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಗುಜರಾತ್‌ನ ಗಾಂಧಿನಗರದ ಸೆಷನ್ಸ್ ನ್ಯಾಯಾಲಯವು 2023ರ ಜನವರಿಯಲ್ಲಿ ಅಸಾರಾಂ ಬಾಪು ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಸಾರಾಂ ಬಾಪು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಆದರೆ, ವಿಚಾರಣೆ ನಡೆಯುತ್ತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...