ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ವಿಕೃತ ಕಾಮುಕ ಮಲತಂದೆ ಜೀವಾಅವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಕಾಮುಕ ಅಪರಾಧಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದೆ.
ಉತ್ತರ ಪ್ರದೇಶದ ಶಾದಿಯಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಪ್ರಕರಣ ದಾಖಲಾಗಿ, ವಿಚಾರಣೆ ಆರಂಭವಾದ ಕೇವಲ 14 ದಿನಗಳನ್ನು ವಿಶೇಷ ನ್ಯಾಯಾಲಯವು ವಿಚಾರಣೆಯನ್ನು ಪೂರ್ಣಗೊಳಿಸಿದೆ. ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಅಪರಾಧಿ ಕಾಮುಕ ಮಲತಂದೆ ಜುಲೈ 18ರಂದು ಕೃತ್ಯ ಎಸಗಿದ್ದನೆಂದು ವರದಿಯಾಗಿದೆ. ಮಗುವಿನ ತಾಯಿ ಅಕ್ಕಿ ಸ್ವಚ್ಚಗೊಳಿಸಲು ಮನೆಯ ಹೊರಗೆ ಕೆಲಸ ಮಾಡುತ್ತಿದ್ದಾಗ, ಮಗುವಿನ ಮೇಲೆ ಅಪರಾಧಿಯು ದೌರ್ಜನ್ಯ ಎಗಸಿದ್ದಾನೆ. ಘಟನೆಯಿಂದಾಗಿ ಮಗುವಿನ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ ಎಂದು ತಾಯಿ ತಿಳಿಸಿದ್ದಾರೆ.
ಜುಲೈ 20ರಂದು ಮಗುವಿನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆ ನಡೆಸಿ ಸೆಪ್ಟೆಂಬರ್ 12ರಂದು ಜಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಲೇಖನ ಓದಿದ್ದೀರಾ?: ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಮತ್ತು ರಾಜಕೀಯ ಲೆಕ್ಕಾಚಾರ…!
ಸೆಪ್ಟೆಂಬರ್ 15ರಂದು ವಿಶೇಷ ನ್ಯಾಯಾಧೀಶ ರಾಮ್ ಅವತಾರ್ ಪ್ರಸಾದ್ ಅವರು ಪ್ರಕರಣದ ವಿಚಾರಣೆಯನ್ನು ಆರಂಭಿಸಿದ್ದರು. ತ್ವರಿತವಾಗಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಾಧೀಶರು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿದ್ದಾರೆ. ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.




