ಮಹಾರಾಷ್ಟ್ರ | ಮಾದಕ ವಸ್ತು ನೀಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಐವರ ಬಂಧನ

Date:

ಒಂಬತ್ತು ವರ್ಷದ ಬಾಲಕಿಗೆ 19 ವರ್ಷದ ಅಪರಿಚಿತ ಯುವಕನೊಬ್ಬ ಮಾದಕ ವಸ್ತು ನೀಡಿ, ಅತ್ಯಾಚಾರವೆಸಗಿ, ನಂತರ ಬೀದಿಯಲ್ಲಿ ಬಿಟ್ಟು ಹೋದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ (ಅ.13) ರಾತ್ರಿ ಚಂದನ್‌ಜಿರಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಮೊದಲು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಛತ್ರಪತಿ ಸಂಭಾಜಿನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ʼಸಂತ್ರಸ್ತೆ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಐದು ಜನರನ್ನು ಬಂಧಿಸಲಾಗಿದ್ದು, ಅದರಲ್ಲಿಆದಿತ್ಯ ಜಾಧವ್‌ (19) ಎಂಬ ವ್ಯಕ್ತಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆʼ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಾಲಕಿ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯನ್ನು ಮನೆಯಿಂದ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಲಾಗಿದೆ. ಬಳಿಕ ಆಕೆಯನ್ನು ಕರೆತಂದು ಬೀದಿಯಲ್ಲಿ ಬಿಟ್ಟು ಹೋಗಿದ್ದಾನೆ. ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆಕೆ ಮನೆಯಿಂದ ಹೊರಗೆ ಹೋಗಿದ್ದಾಗ ಘಟನೆ ನಡೆದಿದ್ದು, ಮನೆಗೆ ಹಿಂದಿರುಗಿದಾಗ ಮಗಳು ಕಂಡಿಲ್ಲ. ತೀವ್ರ ಹುಡುಕಾಟದ ನಂತರ ಸಮೀಪದ ಬೀದಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ.

ಘಟನೆ ಕುರಿತು ಆಕ್ರೋಶಗೊಂಡ ಸ್ಥಳೀಯರು ಛತ್ರಪತಿ ಸಂಭಾಜಿನಗರ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

ಈ ಕುರಿತು ಸಂತ್ರಸ್ತೆ ತಾಯಿ ನೀಡಿದ ದೂರಿನ ಅನ್ವಯ ಚಂದನ್‌ಜಿರಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...